Visitors have accessed this post 13 times.
ಉಡುಪಿ: ಚೈತ್ರಾ ಕುಂದಾಪುರ ಅವರನ್ನು ಬುಧವಾರ ಸಂಜೆ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ವಿಚಾರಣೆ ನಡೆಸಿದ ನ್ಯಾಯಾಲಯ ಅವರನ್ನು ಸಿಸಿಬಿ ಕಸ್ಟಡಿಗೆ ಒಪ್ಪಿಸಿದೆ.
ವಂಚನೆ ಆರೋಪದಲ್ಲಿ ನಡುರಾತ್ರಿ ಹೊತ್ತಿಗೆ ಚೈತ್ರಾ ಕುಂದಾಪುರ ಅವರನ್ನು ಸಿಸಿಬಿ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದರು. ಸಂಜೆ ವೇಳೆಗೆ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಧೀಶರ ಮುಂದೆ ಚೈತ್ರಾ ಕಣ್ಣೀರು ಹಾಕಿದ್ದಾರೆ ಎಂದು ಹೇಳಿದ್ದಾರೆ.
ವಿಚಾರಣೆ ನಡೆಸಿದ ನ್ಯಾಯಾಲಯ, ಸೆಪ್ಟೆಂಭರ್ 23ರವರೆಗೆ ಸಿಸಿಬಿ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ಆದೇಶಿಸಿದೆ.