ಬೆಂಗಳೂರಿನ ಎಲ್ಲಾ ‘RTO’ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ 

ಬೆಂಗಳೂರು : ಬೆಂಗಳೂರಿನ ಎಲ್ಲಾ ಆರ್ ಟಿ ಒ ( RTO) ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ಇಂದು ದಾಳಿ ನಡೆಸಿದ್ದಾರೆ.

ಉಪ ಲೋಕಾಯುಕ್ತ ನ್ಯಾಯಮೂರ್ತಿ ಕೆ ಎನ್ ಫಣೀಂದ್ರ ನೇತೃತ್ವದಲ್ಲಿ ಈ ದಾಳಿ ನಡೆದಿದ್ದು, ಯಶವಂತಪುರ, ಇಂದಿರಾನಗರ, ಜಯನಗರ. ಜ್ಞಾನಭಾರತಿ ಸೇರಿದಂತೆ ಹಲವು ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಆರ್ ಟಿ ಒ ಕಚೇರಿಗಳ ಮೇಲೆ ದಾಳಿ ನಡೆಸಿರುವ ಪೊಲೀಸರು ಮಹತ್ವದ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ. ಧಿಡೀರ್ ಆಗಿ ದಾಳಿ ನಡೆಸಿ ಆರ್ ಟಿ ಒ ಅಧಿಕಾರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್ ನೀಡಿದ್ದಾರೆ.

Leave a Reply