February 1, 2026
WhatsApp Image 2023-09-14 at 8.26.37 AM

ಮಂಗಳೂರು: ಗಣೇಶ ಚತುರ್ಥಿ ಆಚರಣೆಗೆ ಅನುಕೂಲವಾಗುವಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸರಕಾರಿ ರಜೆಯನ್ನು ಸೆ. 18ರ ಬದಲು 19ರಂದು ನೀಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್‌ ಅವರು ಸರಕಾರದ ಮುಖ್ಯ ಕಾರ್ಯದರ್ಶಿ ಹಾಗೂ ದ.ಕ. ಜಿಲ್ಲಾಧಿಕಾರಿಗೆ ಸೂಚಿಸಿದ್ದಾರೆ.

ವಿಧಾನ ಪರಿಷತ್‌ ಸದಸ್ಯ ಪ್ರತಾಪ್‌ ಸಿಂಹ ನಾಯಕ್‌ ಮನವಿ ಮೇರೆಗೆ ಸಚಿವರು ಈ ಸೂಚನೆ ನೀಡಿದ್ದಾರೆ. ಉಡುಪಿ ಜಿಲ್ಲೆಯ ರಜೆ ಬದಲಾವಣೆ ಕುರಿತಂತೆ ನಿರ್ಧಾರ ಇನ್ನೂ ಆಗಿಲ್ಲ.

About The Author

Leave a Reply