ಬೆಳ್ತಂಗಡಿ: ರಿಕ್ಷಾ, ಟೆಂಪೊ, ಲಾರಿಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಮೂವರು ಗಾಯಗೊಂಡ ಘಟನೆ ಬುಧವಾರ ರಾಷ್ಟ್ರೀಯ ಹೆದ್ದಾರಿ 73ರ ಉಜಿರೆ ಸಮೀಪದ ಟಿಬಿ ಕ್ರಾಸ್ ಬಳಿಯ ನಡೆದಿದೆ.
ಬೆಳ್ತಂಗಡಿಯಿಂದ ಉಜಿರೆ ಕಡೆಗೆ ಸಾಗುತ್ತಿದ್ದ ಕಾಂಕ್ರೀಟ್ ಮಿಶ್ರಣದ ಲಾರಿಯ ಚಾಲಕ ನಿಧಾನಗೊಳಿಸಿದಾಗ ಅದರ ಹಿಂದೆ ಬರುತಿದ್ದ ರಿಕ್ಷಾಕ್ಕೆ ಹಿಂಬದಿಯಿಂದ ಟೆಂಪೊ ಢಿಕ್ಕಿ ಹೊಡೆಯಿತು.
ರಿಕ್ಷಾ ಎದುರಿನ ಲಾರಿಗೆ ಢಿಕ್ಕಿ ಹೊಡೆದ ಪರಿಣಾಮ ಜಖಂಗೊಂಡು ರಿಕ್ಷಾ ಚಾಲಕ ಸಹಿತ ಮೂವರಿಗೆ ಗಾಯಗಳಾಗಿವೆ.
ಗಾಯಳು ರಿಕ್ಷಾ ಚಾಲಕ ಬಂಟ್ವಾಳದ ದಾಮೋದರ (32), ಪ್ರಯಾಣಿಕರಾದ ಸೃಜನ್ (27), ಬಿಜು (38), ಅವರಿಗೆ ಸ್ಥಳೀಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪಘಾತದಿಂದಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಹಲವು ಸಮಯ ಸಂಚಾರ ದಟ್ಟಣೆ ಉಂಟಾಗಿತ್ತು. ಚಾಲಕ ಗಂಭೀರ ಗಾಯಗೊಂಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದ್ದು, ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.