
ಮಂಗಳೂರು: ನಗರದ ಪಡೀಲ್ ಅಂಡರ್ ಪಾಸ್‌ನಲ್ಲಿ ಗುರುವಾರ ಸಂಜೆ ನಡೆದಿರುವ ರಸ್ತೆ ಅಪಘಾತದಲ್ಲಿ ವಿದ್ಯಾರ್ಥಿಯೊಬ್ಬ ಮೃತಪಟ್ಟಿದ್ದಾನೆ. ಘಟನೆಯಲ್ಲಿ ಮತ್ತಿಬ್ಬರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಬಜಾಲ್ ಸಮೀಪದ ಪಲ್ಲಕೆರೆಯ ನಿವಾಸಿ ಭವಿನ್ ರಾಜ್ (20) ಮೃತಪಟ್ಟ ವಿದ್ಯಾರ್ಥಿ. ಗಾಲ್ವಿನ್ (19) ಮತ್ತು ಆಶಿತ್ 17) ಎಂಬವರು ಗಂಭೀರವಾಗಿ ಗಾಯಗೊಂಡಿದ್ದು, ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಗರದ ಖಾಸಗಿ ಕಾಲೇಜಿನಲ್ಲಿ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಯಾಗಿದ್ದ ಭವಿನ್ ರಾಜ್ ಗುರುವಾರ ಸಂಜೆ ತನ್ನ ಗೆಳೆಯರೊಂದಿಗೆ ಬೈಕ್ ಸವಾರಿ ಮಾಡುತ್ತಿದ್ದರು. ಆದರೆ ಪಡೀಲ್ ಅಂಡರ್‌ಪಾಸ್ ಬಳಿ ಬರುತ್ತಿದ್ದಂತೆ ನಿಯಂತ್ರಣ ತಪ್ಪಿದ ಬೈಕ್ ಅಂಡರ್‌ಪಾಸ್ ಫುಟ್‌ಪಾತ್‌ಗೆ ಡಿಕ್ಕಿಯಾಗಿದೆ. ಪರಿಣಾಮ ರಸ್ತೆಗೆಸೆಯಲ್ಪಟ್ಟ ಮೂವರು ಗಾಯಗೊಂಡಿದ್ದಾರೆ. ಆದರೆ ಗಂಭೀರವಾಗಿ ಗಾಯಗೊಂಡ ಭವಿನ್ ರಾಜ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಈ ಬಗ್ಗೆ ಮಂಗಳೂರು ದಕ್ಷಿಣ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


