ಗಂಡನ ಹಿಂಸೆ ತಾಳಲಾರದೆ ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ..!

ಇಬ್ಬರು ಮಕ್ಕಳೊಂದಿಗೆ ತಾಯಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ತೆರಕಣಾಂಬಿ ಹೋಬಳಿಯ ಬೊಮ್ಮನಹಳ್ಳಿ ಗ್ರಾಮದಲ್ಲಿ  ನಡೆದಿದೆ.

ಚಾಮರಾಜನಗರ:ಇಬ್ಬರು ಮಕ್ಕಳೊಂದಿಗೆ ತಾಯಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ತೆರಕಣಾಂಬಿ ಹೋಬಳಿಯ ಬೊಮ್ಮನಹಳ್ಳಿ ಗ್ರಾಮದಲ್ಲಿ  ನಡೆದಿದೆ.

ಮೇಘಾ(24), ಅವರ ಮಕ್ಕಳಾದ ಪುನ್ವಿತಾ(6) ಮತ್ತು ಮನ್ವಿತಾ(3) ಮೃತ ದುರ್ದೈವಿಗಳಾಗಿದ್ದಾರೆ.

ಪತಿ ಧನಂಜಯ ಮತ್ತು ಮನೆ ಮಂದಿ ಮೇಘಾರಿಗೆ ಚಿತ್ರಹಿಂಸೆ, ಮಾನಸಿಕ ಕಿರುಕುಳ ನೀಡುತ್ತಿದ್ದರೆನ್ನಲಾಗಿದೆ.

ಇದರಿಂದ ಬೇಸತ್ತು ಮೇಘಾ ತನ್ನಿಬ್ಬರು ಹೆಣ್ಣು ಮಕ್ಕಳೊಂದಿಗೆ ಆತ್ಮಹತ್ಯೆಗೈದಿದ್ದಾರೆ ಎಂದು ತೆರಕಣಾಂಬಿ ಪೊಲೀಸರು ಮಾಹಿತಿ ನೀಡಿದ್ದಾರೆ.

ಧನಂಜಯ ಮತ್ತು ಮೇಘಾ ಎಂಟು ವರ್ಷಗಳ ಹಿಂದೆ ವಿವಾಹಿತರಾಗಿದ್ದು, ಪ್ರಾರಂಭದ ದಿನಗಳಿಂದಲೂ ಕುಟುಂಬದವರೆಲ್ಲಾ ಸೇರಿ ಆಕೆಗೆ ಚಿತ್ರಹಿಂಸೆ ನೀಡುತ್ತಿದ್ದರು ಎಂದು ಮೇಘಾ ಮನೆಮಂದಿ ಆರೋಪಿಸಿದ್ದಾರೆ.

ಗುರುವಾರ ಬೆಳಿಗ್ಗೆಯಿಂದಲೂ ಮನೆಯಲ್ಲಿ ಗಲಾಟೆ ನಡೆದಿತ್ತು ಎಂಬುದು ಮೇಘಾ ಅವರ ಮೊಬೈಲ್ ಫೋನ್ ನಲ್ಲಿ ರೆಕಾರ್ಡ್ ಆಗಿರುವ ವೀಡಿಯೋ ದಾಖಲೆ ಪೊಲೀಸರಿಗೆ ದೊರತಿದೆ ಎಂದು ತಿಳಿದುಬಂದಿದೆ.

ತೆರಕಣಾಂಬಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ.

Leave a Reply