January 16, 2026
WhatsApp Image 2023-09-16 at 10.19.48 AM

ಬಂಟ್ವಾಳ: ನಿಲ್ಲಿಸಿದ್ದ ಲಾರಿಯೊಂದು ಮುಂದೆ ಹೋಗಿ ಕಾರಿಗೆ ಡಿಕ್ಕಿಯಾಗಿದ್ದಲ್ಲದೆ ಬಸ್ ಕಾಯುತ್ತಿದ್ದ ವಿದ್ಯಾರ್ಥಿನಿ ಮತ್ತು ಶಿಕ್ಷಕಿಯೋರ್ವರಿಗೆ ಡಿಕ್ಕಿ ಹೊಡೆದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಮೆಲ್ಕಾರ್ ಎಂಬಲ್ಲಿ ನಡೆದಿದೆ.

ವಿದ್ಯಾರ್ಥಿನಿ ಹಜ್ರಾ ಶಾಮ (20) ಹಾಗೂ ಖತೀಜಾತುಲ್ (18) ಗಾಯಗೊಂಡವರು. ಕೆ.ಎನ್.ಆರ್.ಸಿ.ಕಂಪೆನಿಗೆ ಸೇರಿದ ಲಾರಿಯೊಂದು ಮೆಲ್ಕಾರ್ ನಲ್ಲಿ ಅಪಘಾತಕ್ಕೆ ಕಾರಣವಾಗಿದೆ.

ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ‌ ಮೆಲ್ಕಾರ್ ಎಂಬಲ್ಲಿ ‌ ಸರ್ವೀ್ ರಸ್ತೆಯಲ್ಲಿ ಮಧ್ಯಾಹ್ನ ಕೆ.ಎನ್.ಆರ್ಸಿ.ಕಂಪೆನಿಗೆ ಸೇರಿದ ಲಾರಿಯ ಚಾಲಕ ರಸ್ತೆಯಲ್ಲಿ ‌ಲಾರಿ ನಿಲ್ಲಿಸಿ ಅಂಗಡಿಗೆ ಹೋಗಿದ್ದ.

ಆದರೆ ಹ್ಯಾಂಡ್ ಬ್ರೇಕ್ ‌ಹಾಕದ ಕಾರಣ ಲಾರಿ ಮುಂದೆ ಚಲಿಸಿದ್ದು , ಅಲ್ಲಿಯೇ ಇದ್ದ ಒಮ್ನಿ ಕಾರಿಗೆ ಡಿಕ್ಕಿ ಹೊಡೆದಿದೆ,

ಬಳಿಕ ಮುಂದೆ ಸಾಗಿದ ಲಾರಿ ಬಸ್ ಗಾಗಿ ಕಾಯುತ್ತಿದ್ದ ಶಿಕ್ಷಕಿ ಹಾಗೂ ವಿದ್ಯಾರ್ಥಿನಿಗೆ ಡಿಕ್ಕಿ ಹೊಡೆದು ಬಳಿಕ ರಸ್ತೆ ಬದಿಗೆ ವಾಲಿ ನಿಂತಿದೆ.

ಡಿಕ್ಕಿಹೊಡೆದ ಪರಿಣಾಮ ಅವರಿಬ್ಬರೂ ರಸ್ತೆ ಬದಿಯಲ್ಲಿರುವ ನೀರು ಹೋಗುವ ಸಣ್ಣ ಕಣಿಗೆ ಬಿದ್ದಿದ್ದಾರೆ. ಇಬ್ಬರಿಗೂ ಗಾಯವಾಗಿದ್ದು ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಾಲಕ ಆನಂದ ಪಾಸ್ವಾನ್ ರವರ ನಿರ್ಲಕ್ಷ್ಯ ತನವೇ ಕಾರಣ ಎಂದು ಆತನ ಮೇಲೆ ಪ್ರಕರಣ ದಾಖಲಿಸಲಾಗಿದೆ.

About The Author

Leave a Reply