
ತಿರುವನಂತಪುರಂ: ಕೇರಳದ ಕೋಝಿಕೋಡ್ ಜಿಲ್ಲೆಯಲ್ಲಿ 39 ವರ್ಷದ ವ್ಯಕ್ತಿಯಲ್ಲಿ ನಿಫಾ ಸೋಂಕು ದೃಢವಾಗಿದೆ. ಈ ಮೂಲಕ ಕೇರಳದಲ್ಲಿ ನಿಫಾ ವೈರಸ್ ಪ್ರಕರಣ 6ಕ್ಕೆ ಏರಿಕೆಯಾಗಿದೆ. ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವ್ಯಕ್ತಿ ನಿಫಾ ವೈರಸ್ ಹಾಗೂ ಇತರ ಕಾಯಿಲೆಗಳಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ.



ಪ್ರಾಣಿಗಳಿಂದ ಮನುಷ್ಯರಿಗೆ ಹರಡುವ ನಿಫಾ ವೈರಸ್‍ಗೆ ಈ ವರ್ಷ ಕೇರಳದಲ್ಲಿ ಈಗಾಗಲೇ ಇಬ್ಬರು ಸಾವನ್ನಪ್ಪಿದ್ದಾರೆ. ಈ ಮೂಲಕ 2018 ರಿಂದ ಇದುವರೆಗೆ ನಾಲ್ಕು ಮಂದಿ ಮೃತಪಟ್ಟಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವ್ಯಕ್ತಿಯ ಸ್ಯಾಂಪಲ್‍ಗಳನ್ನು ಪರೀಕ್ಷೆಗೆ ಕಳುಹಿಸಿಕೊಡಲಾಗಿದೆ. ಅದರ ವರದಿ ಬಂದಿದ್ದು, ವ್ಯಕ್ತಿಗೆ ನಿಫಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಸದ್ಯ ಅವರನ್ನು ಆಸ್ಪತ್ರೆಯಲ್ಲಿ ನಿಗಾವಹಿಸಲಾಗಿದೆ ಎಂದು ರಾಜ್ಯ ಆರೋಗ್ಯ ಸಚಿವೆ ವೀಣಾ ಜಾರ್ಜ್ ತಿಳಿಸಿದ್ದಾರೆ.