Visitors have accessed this post 231 times.
ಸುಳ್ಯ: ಬೈಕ್ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಕೊಡಗು ಸೋಮವಾರಪೇಟೆಯ ಬಸವನಹಳ್ಳಿಯ ಸುಬ್ರಮಣಿ (26) ಎಂದು ಗುರುತಿಸಲಾಗಿದೆ.
ಸೆ. 16ರಂದು ನಾಪತ್ತೆಯಾಗಿದ್ದ ಬೈಕ್ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ,ತನಿಖೆ ನಡೆಸಿದ ಸುಳ್ಯ ಪೊಲೀಸ್ ಉಪ ನಿರೀಕ್ಷಕರು ಮತ್ತು ಸಿಬ್ಬಂದಿ ತಂಡ ಕ್ಷಿಪ್ರ ಕಾರ್ಯಾಚರಣೆ ನಡೆಸಿ,ಕೆಲವೇ ಗಂಟೆಗಳಲ್ಲಿ ಸುಳ್ಯ ತಾಲೂಕು ಆಲಟ್ಟಿ ಗ್ರಾಮದ ಸರಳಿಕುಂಜ ಎಂಬಲ್ಲಿ ಆರೋಪಿಯನ್ನು ಪತ್ತೆ ಮಾಡಿದ್ದಾರೆ.
ಇದಲ್ಲದೆ ಆರೋಪಿ ಸುಬ್ರಮಣಿ ಕೆಲ ದಿನಗಳ ಹಿಂದೆ ಸುಳ್ಯ ಬಸ್ ನಿಲ್ದಾಣದಲ್ಲಿ ಬಿದ್ದಿದ್ದ ವ್ಯಕ್ತಿಯೊಬ್ಬರ ಪರ್ಸ್ ತೆಗೆದುಕೊಂಡು ಹೋಗಿದ್ದು ತನಿಖೆ ವೇಳೆ ತಿಳಿದುಬಂದಿದೆ.