Visitors have accessed this post 289 times.
ಮೈಸೂರು: ವಿದ್ಯಾರ್ಥಿಗಳ ನಡುವೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಮೈಸೂರಿನ ಜೆ.ಪಿ.ನಗರದ ಕಾಲೇಜು ಬಳಿ ನಡೆದಿದೆ.
ಕೃಷ್ಣ (17) ಕೊಲೆಯಾದ ವಿದ್ಯಾರ್ಥಿ. ಕ್ಷುಲ್ಲಕ ಕಾರಣಕ್ಕಾಗಿ ವಿದ್ಯಾರ್ಥಿಗಳ ನಡುವೆ ಗಲಾಟೆ ಆರಂಭವಾಗಿತ್ತು. ಜಗಳ ವಿಕೋಪಕ್ಕೆ ತಿರುಗಿದ್ದು, ಗಲಾಟೆಯಲ್ಲಿ ಓರ್ವ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ.
ವಿದ್ಯಾರ್ಥಿಗಳ ನಡುವಿನ ಕಾದಾಟಕ್ಕೆ ಕಾರಣವೇನು ಎಂಬ ಬಗ್ಗೆ ನಿಖರ ಮಾಹಿತಿ ತಿಳಿದಿಬಂದಿಲ್ಲ. ವಿದ್ಯಾರಣ್ಯಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ