ಬಂಟ್ವಾಳ : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ, ದ.ಕ ಜಿಲ್ಲಾ ಸಮಿತಿ ಹಮ್ಮಿಕೊಂಡಿರುವ ಬ್ಲಾಕ್ ಸಮಾಗಮ- 2023 ಕಲ್ಲಡ್ಕ ಬ್ಲಾಕ್ ಅಧ್ಯಕ್ಷರಾದ ಮುಬಾರಕ್ ಕಾರಾಜೆ ನೇತೃತ್ವದಲ್ಲಿ ಕ್ಷೇತ್ರ ಸಮಿತಿ ಕಚೇರಿಯಲ್ಲಿ ನಡೆಯಿತು.
ಮುಖ್ಯ ಅಥಿತಿಗಳಾಗಿ ದ.ಕ ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ಬಜತ್ತೂರು, ಜಿಲ್ಲಾ ಸಮಿತಿ ಸದಸ್ಯರಾದ ಅಬೂಬಕ್ಕರ್ ಮದ್ದ, ಬಶೀರ್ ಬೊಳ್ಳಾಯಿ, ಬಂಟ್ವಾಳ ವಿಧಾನಸಭಾ
ಕ್ಷೇತ್ರ ಸಮಿತಿ ಅಧ್ಯಕ್ಷರಾದ ಮೂನೀಶ್ ಅಲಿ, ಕಾರ್ಯದರ್ಶಿಗಳಾದ ಅಶ್ರಫ್ ತಲಪಾಡಿ, ಮನ್ಸೂರ್ ಕಲ್ಲಡ್ಕ ಆಗಮಿಸಿದ್ದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ಬಜತ್ತೂರ್ ಪಕ್ಷದ ಕಾರ್ಯಚಟುವಟಿಕೆಗಳನ್ನು ಹಾಗೂ ಮುಂದಿನ ಕಾರ್ಯ ಯೋಜನೆಗಳನ್ನು ವಿವರಿಸಿ, ಎಲ್ಲಾ ಸ್ಥರದ ಪದಾಧಿಕಾರಿಗಳು ಹಾಗೂ ನಾಯಕರು ಪಕ್ಷವನ್ನು ಬೂತ್ ಮಟ್ಟದಿಂದ ಸಂಘಟಿಸಿ ಮತ್ತಷ್ಟು ಬಲಿಷ್ಠಗೊಳಿಸುವಂತೆ ಕರೆನೀಡಿದರು. ಜಿಲ್ಲಾ ಸಮಿತಿ ಸದಸ್ಯರಾದ ಅಬೂಬಕ್ಕರ್ ಮದ್ದ ಸಮಾರೋಪ ಭಾಷಣಗೈದರು.
ಸಭೆಯಲ್ಲಿ ಬ್ಲಾಕ್ ಸಮಿತಿ ಪದಾಧಿಕಾರಿಗಳು, ಗ್ರಾಮ ಸಮಿತಿ, ಬೂತ್ ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಕಲ್ಲಡ್ಕ ಬ್ಲಾಕ್ ಕಾರ್ಯದರ್ಶಿಗಳಾದ ಮುಬಾರಕ್ ಕಾರಾಜೆ ಸ್ಥಾಗತಿಸಿ, ಬ್ಲಾಕ್ ಕಾರ್ಯದರ್ಶಿಗಳಾದ ಯಾಸೀರ್ ಕಲ್ಲಡ್ಕ ಧನ್ಯವಾದಗೈದರು.