Visitors have accessed this post 557 times.
ಬಂಟ್ವಾಳ: ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದ ಬಾಲಕಿಯೊಬ್ಬಳು ಭಾನುವಾರ ಮುಂಜಾನೆ ಮೃತಪಟ್ಟಿರುವ ಘಟನೆ ನಡೆದಿದೆ.
ಮೃತ ಬಾಲಕಿಯನ್ನು ಮಿತ್ತೂರು ಸಮೀಪದ ಪಾಟ್ರಕೋಡಿ ನಿವಾಸಿ ಇಬ್ರಾಹಿಂ ಬಾತಿಷಾ ರವರ ಪುತ್ರಿ ಜಮೀಲಾ ಸನಿಕ (4) ಎಂದು ಗುರುತಿಸಲಾಗಿದೆ.
ಪುತ್ತೂರಿನ ಮುರದಲ್ಲಿರುವ ಅಲ್ ಬಿರ್ರ್ ಸ್ಕೂಲ್ ನ ಎಲ್.ಕೆ.ಜಿ. ಯಲ್ಲಿ ಕಲಿಯುತ್ತಿದ್ದ ಈಕೆ ಅನಾರೋಗ್ಯದಿಂದ ಇದ್ದು ಬೆಂಗಳೂರಿನ ಹೃದಯಾಲಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಳು. ಭಾನುವಾರ ಮುಂಜಾನೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲೇ ಮೃತಪಟ್ಟಿದ್ದಾಳೆ.