
ಬಂಟ್ವಾಳ : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ, ದ.ಕ ಜಿಲ್ಲಾ ಸಮಿತಿ ಹಮ್ಮಿಕೊಂಡಿರುವ ಬ್ಲಾಕ್ ಸಮಾಗಮ- 2023 ಬಂಟ್ವಾಳ ಕ್ಷೇತ್ರ ಸಮಿತಿ ಸದಸ್ಯರಾದ ಇರ್ಪಾನ್ ತುಂಬೆ ರವರ ನೇತೃತ್ವದಲ್ಲಿ ಕ್ಷೇತ್ರ ಸಮಿತಿ ಕಚೇರಿಯಲ್ಲಿ ನಡೆಯಿತು.



ಮುಖ್ಯ ಅಥಿತಿಗಳಾಗಿ ದ.ಕ ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ಬಜತ್ತೂರು, ಜಿಲ್ಲಾ ಸಮಿತಿ ಸದಸ್ಯರಾದ ಮೂಸಬ್ಬ ತುಂಬೆ, ನಝೀರ್ ಕುಂಜತ್ಕಲ, ಬಂಟ್ವಾಳ ವಿಧಾನಸಭಾ
ಕ್ಷೇತ್ರ ಸಮಿತಿ ಜೊತೆ ಕಾರ್ಯದರ್ಶಿ ಅಶ್ರಪ್ ತಲಪಾಡಿ, ಎಸ್ ಡಿ ಪಿ ಐ ತುಂಬೆ ಗ್ರಾಮ ಸಮಿತಿ ಅಧ್ಯಕ್ಷರಾದ ಅಝೀಝ್ ತುಂಬೆ ಮತ್ತು ಪುದು ಗ್ರಾಮ ಸಮಿತಿ ಅಧ್ಯಕ್ಷರಾದ ಶಾಫಿ ಅಮ್ಮೆಮಾರ್ ಉಪಸ್ಥಿತರಿದ್ದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ಬಜತ್ತೂರ್ ಪಕ್ಷದ ಕಾರ್ಯಚಟುವಟಿಕೆಗಳನ್ನು ಹಾಗೂ ಮುಂದಿನ ಕಾರ್ಯ ಯೋಜನೆಗಳನ್ನು ವಿವರಿಸಿ, ಎಲ್ಲಾ ಸ್ಥರದ ಪದಾಧಿಕಾರಿಗಳು ಹಾಗೂ ನಾಯಕರು ಪಕ್ಷವನ್ನು ಬೂತ್ ಮಟ್ಟದಿಂದ ಸಂಘಟಿಸಿ ಮತ್ತಷ್ಟು ಬಲಿಷ್ಠಗೊಳಿಸುವಂತೆ ಕರೆನೀಡಿದರು. ಜಿಲ್ಲಾ ಸಮಿತಿ ಸದಸ್ಯರಾದ ನಝೀರ್ ಕುಂಜತ್ಕಲ ಸಮಾರೋಪ ಭಾಷಣಗೈದರು.
ಸಭೆಯಲ್ಲಿ ಗ್ರಾಮ ಸಮಿತಿ ಸದಸ್ಯರು ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.
ಶಾಫಿ ಅಮ್ಮೆಮಾರ್ ಸ್ವಾಗತಿಸಿ, ಧನ್ಯವಾದಗೈದರು.