Visitors have accessed this post 730 times.
ಪುತ್ತೂರು: ಎಸ್‌ಡಿಪಿಐ ಪಕ್ಷದ ಸಕ್ರಿಯ ಕಾರ್ಯಕರ್ತರಾಗಿದ್ದ ಪುತ್ತೂರು ಸಾಲ್ಮರ ನಿವಾಸಿ ಅಬ್ದುಲ್ ಖಾದರ್ (ಕಾಯಿಂಞಿ) ರವರು ನಿಧನ ಹೊಂದಿರುತ್ತಾರೆ. ಇವರ ನಿಧನಕ್ಕೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪುತ್ತೂರು ನಗರ ಸಮಿತಿಯು ತೀವ್ರ ಸಂತಾಪವನ್ನು ವ್ಯಕ್ತಪಡಿಸುತ್ತದೆ.
ಪಕ್ಷದ ಸಕ್ರಿಯ ಕಾರ್ಯಕರ್ತನಾಗಿ ನಮ್ಮ ಎಲ್ಲಾ ಹೋರಾಟ, ಸಮಾಜ ಸೇವಾ ಕಾರ್ಯಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುತ್ತಿದ್ದ ಇವರ ಅಗಲಿಕೆಯು ಪಕ್ಷಕ್ಕೆ ತುಂಬಲಾರದ ನಷ್ಟವಾಗಿದೆ.
ಸೃಷ್ಟಿಕರ್ತನು ಇವರ ಪರಲೋಕ ಯಾತ್ರೆಯನ್ನು ಸುಗಮಗೊಳಿಸಲಿ. ಕುಟುಂಬಕ್ಕೆ ಮತ್ತು ಬಂದು ಬಳಗಕ್ಕೆ ಇವರ ಅಗಲುವಿಕೆಯ ನೋವನ್ನು ಸಹಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇವೆ.
SDPI ಪುತ್ತೂರು ನಗರ ಸಮಿತಿ