August 30, 2025
WhatsApp Image 2023-09-28 at 8.57.53 AM

ಬಂಟ್ವಾಳ : ಖೋಟಾ ನೋಟು ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 20 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಹಳೆಯ ಆರೋಪಿಯೋರ್ವನನ್ನು ಬಂಟ್ವಾಳ ನಗರ ಠಾಣಾ ಪೋಲಿಸರು ಬಂಧಿಸಿ , ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಬಂಧಿತ ಆರೋಪಿಯನ್ನು ಪುತ್ತೂರು ತಾಲೂಕಿನ ನೆಲ್ಯಾಡಿ ಕೌಕ್ರಾಡಿ ಗ್ರಾಮದ ಮಣ್ಣಗುಂಡಿ ನಿವಾಸಿ ಇಬ್ರಾಹಿಂ (55) ಎಂದು ಗುರುತಿಸಲಾಗಿದೆ. 2004 ರಲ್ಲಿ ಕೋಟಾ ನೋಟು ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರ ಮೇಲೆ ಪ್ರಕರಣ ದಾಖಲಾಗಿತ್ತು. ಇನ್ನೊಬ್ಬ ಆರೋಪಿ ಶರಣಾಗತನಾಗಿದ್ದು, ಈತ ತಲೆಮರೆಸಿಕೊಂಡಿದ್ದ. ಇದೀಗ ನಗರ ಠಾಣಾ ಪೋಲೀಸ್ ಇನ್ಸ್ ಪೆಕ್ಟರ್ ಆನಂತಪದ್ಮನಾಭ ಮತ್ತು ಎಸ್.ಐ.ರಾಮಕೃಷ್ಣ ಅವರ ಮಾರ್ಗದರ್ಶನದಂತೆ ಸಿಬ್ಬಂದಿಗಳಾದ ಗಣೇಶ್ ಮತ್ತು ಗೋಪಾಲಕೃಷ್ಣ ಅವರು ನೆಲ್ಯಾಡಿಯಲ್ಲಿ ಬಂಧಿಸಿದ್ದಾರೆ. ಇದೀಗ ಆರೋಪಿಯನ್ನು ಪೋಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ಈತನಿಗೆ ‌ನ್ಯಾಯಾಂಗ ಬಂಧನ ವಿಧಿಸಿರುತ್ತದೆ.

About The Author

Leave a Reply