November 8, 2025
WhatsApp Image 2023-09-28 at 9.36.39 AM

ಬೆಂಗಳೂರು : ನಾಳೆ ಅಖಂಡ ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಸಾರ್ವಜನಿಕರಿಗೆ ಅಗತ್ಯವಿರುವ ಸೇವೆಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ಸೇವೆಗಳು ಬಂದ್ ಅಗಲಿವೆ. ಯಾವ ಯಾವ ಸೇವೆಗಳು ಇರಲಿದ್ದು, ಯಾವ ಸೇವೆಗಳು ಬಂದ್ ಆಗುವುದರ ಮಾಹಿತಿ ಇಲ್ಲಿದೆ.

ನಾಳೆ ಅಖಂಡ ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಹೋಟೆಲ್ ಮಾಲೀಕರ ಸಂಘ ಬೆಂಬಲ ಸೂಚಿಸಿದ್ದರಿಂದ ಎಲ್ಲ ಹೋಟೆಲ್ ಗಳು ಬಂದ್ ಇರಲಿವೆ, ಚಲನಚಿತ್ರ ವಾಣಿಜ್ಯ ಮಂಡಳಿ ಕೂಡ ನಾಳಿನ ಬಂದ್ ಗೆ ಬೆಂಬಲ ನೀಡಿರುವುದರಿಂದ ಚಿತ್ರಮಂದಿರಗಳು ಬಂದ್ ಇರಲಿವೆ.

ಶಾಪಿಂಗ್ ಮಾಲ್ಗಳು ಬಂದಾಗಲಿವೆ, ಆಟೋ, ಕ್ಯಾಬ್ ಓಲಾ, ಉಬರ್ಗಳು ಸೇರಿದಂತೆ ಖಾಸಗಿ ಸಾರಿಗೆ ವಾಹನಗಳು ಶುಕ್ರವಾರ ರಸ್ತೆಗೆ ಇಳಿವುದಿಲ್ಲ ಅಲ್ಲದೆ ಬೇಕರಿಗಳು ಸಹ ಕ್ಲೋಸ್ ಆಗಿರಲಿವೆ.

ಇನ್ನೂ ಅಗತ್ಯ ಸೇವೆಗಳು ಅಂದರೆ ತುರ್ತು ಸೇವೆಗಳಾದ ಆಸ್ಪತ್ರೆ, ಮೆಡಿಕಲ್ ಶಾಪ್ ಗಳು, ಅಂಬುಲೆನ್ಸ್ ಸೇವೆಗಳು ಎಂದಿನಂತೆ ಕಾರ್ಯ ನಿರ್ವಹಿಸಲಿವೆ. ನಂದಿನಿ ಹಾಲಿನ ಅಂಗಡಿಗಳು ತೆರೆದಿರುತ್ತವೆ.ಅದರಂತೆ ಶಾಲಾ ಕಾಲೇಜುಗಳು, ಮೆಟ್ರೋ ಸೇವೆಗಳ ಬಗ್ಗೆ, ಬಿಎಂಟಿಸಿ, ಕೆಎಸ್‌ಆರ್ಟಿಸಿ ಸಂಚಾರ ಬಗ್ಗೆ ಇನ್ನೂ ನಿರ್ಧಾರವಾಗಿಲ್ಲ.

ಕಾವೇರಿ ನೀರು ತಮಿಳುನಾಡಿಗೆ ಹಾರೈಸುತ್ತಿರುವುದನ್ನು ವಿರೋಧಿಸಿ ನಾಳೆ ಕನ್ನಡಪರ ಸಂಘಟನೆಗಳು ಸೇರಿದಂತೆ ವಿವಿಧ ಸಂಘಟನೆಗಳು, ಕರ್ನಾಟಕ ಬಂದ್ ಗೆ ಕರೆ ನೀಡಿವೆ ಅದರಂತೆ ಇಂದು ಬೆಂಗಳೂರಿನಲ್ಲಿ ವಾಟಾಳ್ ನಾಗರಾಜ್ ಸಿಟಿ ರೌಂಡ್ಸ್ ಹಾಕಲಿದ್ದಾರೆ.

ಕರ್ನಾಟಕ್ ಬಂದ್ ಗೆ ಬೆಂಬಲಿಸಲು ರಾಜ್ಯದ ಜನತೆಗೆ ಮನವಿ ಮಾಡಲಿದ್ದಾರೆ.ಮಧ್ಯಾಹ್ನ 12 ರಿಂದ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಸಿಟಿ ರೌಂಡ್ಸ್ ನಡೆಯಲಿದೆ. ಮೈಸೂರು ಬ್ಯಾಂಕ್ ವೃತ್ತದಿಂದ ಸಿಟಿ ರೌಂಡ್ಸ್ ಆರಂಭವಾಗಲಿದ್ದು, ತೆರೆದ ವಾಹನದಲ್ಲಿ ಇಡೀ ಬೆಂಗಳೂರು ನಗರದಾದ್ಯಂತ ಸಂಚರಿಸಿ ಜನರಲ್ಲಿ ಹಾಗೂ ಸಾರ್ವಜನಿಕರಲ್ಲಿ ಮನವಿ ಮಾಡಲಿದ್ದಾರೆ ಎನ್ನಲಾಗುತ್ತಿದೆ.

ಹೋಟೆಲ್ ಮಾಲೀಕರು, ಥಿಯೇಟರ್ ಮಾಲೀಕರು, ಮಾಲ್ ಮಾಲೀಕರು, ಅಂಗಡಿ ಮಾಲೀಕರು, ಕ್ಯಾಬ್, ಆಟೋ, ಬಿಎಂಟಿಸಿ, ಕೆ ಎಸ್ ಆರ್ ಟಿ ಸಿ, ಖಾಸಗಿ ಬಸ್ ಚಾಲಕರು, ಎಪಿಎಂಸಿಯ ಮಾಲೀಕರು, ಕಾರ್ಮಿಕರು, ಬೀದಿ ವ್ಯಾಪಾರಿಗಳನ್ನು ಭೇಟಿ ಮಾಡಿ ಕರ್ನಾಟಕ ಬಂದ್ ಗೆ ಬೆಂಬಲಿಸುವಂತೆ ಮನವಿ ಮಾಡಲಿದ್ದಾರೆ.

About The Author

Leave a Reply