Visitors have accessed this post 1823 times.

ಪುತ್ತೂರು: ವಿವಾಹಿತ ಮಹಿಳೆಯ ಜೊತೆ ಲೈಂಗಿಕ ಸಂಪರ್ಕ, ಬ್ಲಾಕ್ ಮೇಲ್ : ಗ್ರಾ.ಪಂ. ಮಾಜಿ ಸದಸ್ಯ ಅರೆಸ್ಟ್

Visitors have accessed this post 1823 times.

ಬಣ್ಣದ ಮಾತುಗಳಿಂದ ವಿಶ್ವಾಸ ಗಳಿಸಿ ವಿವಾಹಿತ ಮಹಿಳೆಯನ್ನು ಲೈಂಗಿಕವಾಗಿ ಬಳಸಿಕೊಂಡು ಪುತ್ತೂರಿನ ವ್ಯಕ್ತಿಯೊಬ್ಬ ಕೊನೆಗೆ ಮಹಿಳೆಯನ್ನೇ ಬ್ಲಾಕ್ ಮೇಲ್ ಮಾಡಿ ಹಣ ಕೀಳಲು ಯತ್ನಿಸಿದ ಬಗ್ಗೆ ಕಾರವಾರ ಮಹಿಳಾ ಠಾಣೆಯಲ್ಲಿ ದೂರು ದಾಖಲಾಗಿದೆ. ಪುತ್ತೂರಿನ ಆರ್ಲಪದವು ಮೂಲದ ಪ್ರಶಾಂತ ಭಟ್ ಮಾಣಿಲ ಆರೋಪಿ.

ದೂರು ನೀಡಿದ ಮಹಿಳೆಯು ಸಂಗೀತದಲ್ಲಿ ಆಸಕ್ತಿ ಇದ್ದು ಕ್ಲಬ್ ಹೌಸ್ ಆ್ಯಪ್‌ನಲ್ಲಿ ಹಾಡುತ್ತಿದ್ದಳು. 2020 ರಲ್ಲಿ ಆ್ಯಪ್ ಮೂಲಕವೇ ಆರೋಪಿಯ ಪರಿಚಯವಾಗಿದೆ. ಪರಿಚಯ ಸ್ನೇಹಕ್ಕೆ ತಿರುಗಿ ಕ್ರಮೇಣ ಪರಸ್ಪರ ಇಷ್ಟಪಟ್ಟಿದ್ದಾರೆ. 2023ರ ಜನವರಿ ತಿಂಗಳಲ್ಲಿ ಆರೋಪಿಯು ಮಹಿಳೆಯನ್ನು ಭೇಟಿಯಾಗಲು ಬಂದು ಖಾಸಗಿ ಲಾಡ್ಜ್ ಒಂದರಲ್ಲಿ ರೂಂ ಮಾಡಿದ್ದಾನೆ. ಅಲ್ಲಿ ಮಹಿಳೆಯ ಮೇಲೆ ಆರೋಪಿಯು ಲೈಂಗಿಕ ಹಲ್ಲೆ ನಡೆಸಿದ್ದಾನೆ. ಅಲ್ಲದೇ ಅದೇ ಲಾಡ್ಜಿನಲ್ಲಿ ಘಟನೆಯು ಮತ್ತೊಮ್ಮೆ ನಡೆದಿದೆ ಎಂದು ಮಹಿಳೆಯು ದೂರಿನಲ್ಲಿ ದಾಖಲಿಸಿದ್ದಾರೆ. ಈ ವೇಳೆ ಆರೋಪಿಯು ಮಹಿಳೆಯೊಂದಿಗಿರುವ ಖಾಸಗಿ ಕ್ಷಣಗಳ ಫೋಟೋ ಕ್ಲಿಕ್ಕಿಸಿಕೊಂಡಿದ್ದಾನೆ. ಜತೆಗೆ ವಿಡಿಯೋ ಕಾಲ್ ಮಾಡಿ ಅಲ್ಲಯೂ ನಗ್ನ ದೃಶ್ಯಗಳನ್ನು ಸೆರೆ ಹಿಡಿದಿದ್ದಾನೆ ಎಂದು ದೂರಲಾಗಿದೆ. ಆರೋಪಿಯು ಮಹಿಳೆಯಿಂದ ಹಣಕ್ಕೂ ಬೇಡಿಕೆ ಇಟ್ಟಿದ್ದು, ಮಹಿಳೆಯು ಒಮ್ಮೆ 25 ಸಾವಿರ ಹಣ ನೀಡಿದ್ದಾಳೆ. ಬಳಿಕ ಆರೋಪಿಯು ಖಾಸಗಿ ಚಿತ್ರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿ ಬಿಡುವುದಾಗಿ ಬೆದರಿಕೆ ನೀಡಿ ಏಳು ಲಕ್ಷ ರೂ. ಗಳಿಗೆ ಬೇಡಿಕೆ ಇಟ್ಟಿದ್ದಾನೆ. ಅಲ್ಲದೇ ಮಹಿಳೆಯ ತಾಯಿ ಹಾಗು ಸ್ನೇಹಿತರಿಗೂ ಖಾಸಗಿ ಕ್ಷಣಗಳ ಚಿತ್ರಗಳನ್ನು ಕಳುಹಿಸಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಕಾರವಾರದ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *