August 30, 2025
WhatsApp Image 2023-09-29 at 3.42.47 AM

ಉಳ್ಳಾಲ:(ಮಂಗಳೂರು) ಉಳ್ಳಾಲದ ಸೀಗ್ರೌಂಡ್ ಸಮುದ್ರ ತೀರದಲ್ಲಿ ನಿಷೇಧಿತ ಎಂಡಿಎಂಎ ಮಾರಾಟ ನಡೆಸಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನ ಉಳ್ಳಾಲ ಠಾಣಾಧಿಕಾರಿ ನೇತೃತ್ವದ ಪೊಲೀಸರ ತಂಡ ಬಂಧಿಸಿದೆ. ಮಾಸ್ತಿಕಟ್ಟೆ ಆಝಾದ್ ನಗರದ ಫಝಲ್ ಮತ್ತು ಮುಕ್ಕಚ್ಚೇರಿ ಕಡಪ್ಪರದ ಸಮೀರ್ ಬಂಧಿತರು. ಇಬ್ಬರು ಆರೋಪಿಗಳು ಉಳ್ಳಾಲ ಸೀಗ್ರೌಂಡ್ ಸಮುದ್ರ ತೀರದಲ್ಲಿ ನಿಷೇಧಿತ 14 ಗ್ರಾಂ ತೂಕದ ಎಂಡಿಎಂಎ ಮಾರಾಟ ಮಾಡಲು ಯತ್ನಿಸುವ ಸಂದರ್ಭ ಮಾಹಿತಿ ಪಡೆದ ಉಳ್ಳಾಲ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ. ಎರಡು ದಿನಗಳ ಹಿಂದಷ್ಟೇ ದೇರಳಕಟ್ಟೆ ಯೆನೆಪೋಯ ಆಸ್ಪತ್ರೆ ಬಳಿಯಿಂದ ಓರ್ವ ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದರು. ಬಂಧಿತರಿಂದ 14 ಗ್ರಾಂ ಎಂಡಿಎಂಎ ,ಮೊಬೈಲ್ ಫೋನ್‌ಗಳು ಸೇರಿದಂತೆ ಒಟ್ಟು ಒಂದು ಲಕ್ಷ ಹದಿನೆಂಟುವರೆ ಸಾವಿರ ಮೌಲ್ಯದ ಸೊತ್ತುಗಳನ್ನ ವಶಪಡಿಸಿ ಕೊಳ್ಳಲಾಗಿದೆ.ಉಳ್ಳಾಲ ಠಾಣಾಧಿಕಾರಿ ಹೆಚ್.ಎನ್ ಬಾಲಕೃಷ್ಣ, ಪಿಎಸ್‌ಐ ಶೀತಲ್ ಹಾಗೂ ಸಿಬ್ಬಂದಿ ಅಕ್ಬರ್, ಅಶೋಕ್, ಮಂಜು, ವೆಂಕಟೇಶ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

About The Author

Leave a Reply