Visitors have accessed this post 400 times.
ಮಣಿಪುರ: ಮಣಿಪುರದಲ್ಲಿ ನಡೆದ ಇಬ್ಬರು ವಿದ್ಯಾರ್ಥಿಗಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರಿಯಾ ತನಿಖಾ ಸಂಸ್ಥೆ (ಸಿಬಿಐ) ನಾಲ್ವರು ಆರೋಪಿಗಳನ್ನು ವಶಕ್ಕೆ ಪಡೆದಿದೆ.
ಇಂಫಾಲ್‌ನಲ್ಲಿ ಬಂಧನಕ್ಕೊಳಗಾದ ನಾಲ್ವರಲ್ಲಿ ಇಬ್ಬರು ಪುರುಷರು ಮತ್ತು ಇಬ್ಬರು ಮಹಿಳೆಯರಿದ್ದಾರೆ. ವಶಕ್ಕೆ ಪಡೆಯಲಾಗಿರುವ ಇಬ್ಬರು ಹುಡುಗಿಯರು ಎನ್ನಲಾಗಿದೆ. ಬಂಧಿತ ನಾಲ್ವರನ್ನು ಅಸ್ಸಾಂನ ಗುವಾಹಟಿಗೆ ರವಾನಿಸಲಾಗಿದೆ.
ಬಂಧಿತ ಆರೋಪಿಗಳನ್ನು ಪಾವೊಮಿನ್ಲುನ್ ಹಾಕಿಪ್, ಮಲ್ಸಾವ್ನ್ ಹಾಕಿಪ್, ಲಿಂಗ್ನಿಚಾಂಗ್ ಬೈಟ್ ಮತ್ತು ತಿನ್ನೆಖೋಲ್ ಎಂದು ಗುರುತಿಸಲಾಗಿದೆ. ಲಿಂಗ್ನೀಚಾಂಗ್ ಬೈಟ್ ಕೊಲೆಯಾದ ವಿದ್ಯಾರ್ಥಿನಿಯ ಸ್ನೇಹಿತ. ಶಂಕಿತರಲ್ಲಿ ಒಬ್ಬಾಕೆ ಚುರಾಚಂದ್‌ಪುರ ಮೂಲದ ದಂಗೆಕೋರ ಗುಂಪಿನ ಸದಸ್ಯನ ಪತ್ನಿ ಎಂದು ಹೇಳಲಾಗಿದೆ.
ಮಣಿಪುರ ಪೊಲೀಸ್ ಮತ್ತು ಭಾರತೀಯ ಸೇನೆಯ ಜಂಟಿ ಕಾರ್ಯಾಚರಣೆಯಲ್ಲಿ ಕ್ರ್ಯಾಕ್ ಘಟಕವು ಶಂಕಿತರನ್ನು ಇಂಫಾಲ್‌ನಿಂದ 51 ಕಿಮೀ ದೂರದಲ್ಲಿರುವ ಚುರಚಂದ್‌ಪುರದಲ್ಲಿ ಅರೆಸ್ಟ್ ಮಾಡಲಾಗಿದೆ.
ಹತ್ಯೆಗೆ ಕಾರಣವಾದ ಕೆಲವು ಪ್ರಮುಖ ಆರೋಪಿಗಳನ್ನು ಚುರಚಂದ್‌ಪುರದಿಂದ ಬಂಧಿಸಿರುವುದು ಸಮಾಧಾನ ತಂದಿದೆ .ಇಬ್ಬರು ವಿದ್ಯಾರ್ಥಿನಿಯರ ಹತ್ಯೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ” ತಪ್ಪಿತಸ್ಥರಿಗೆ ಮರಣದಂಡನೆಯಂತಹ ಹೆಚ್ಚಿನ ವಿಧಿಸಲಾಗುವುದು” ಎಂದು ಕೇಂದ್ರ ಗೃಹ ಸಚಿವರು ಭರವಸೆ ನೀಡಿದ್ದಾರೆ ಎಂದು ಮಣಿಪುರ ಮುಖ್ಯಮಂತ್ರಿ ಬಿರೇನ್ ಸಿಂಗ್ ಹೇಳಿದ್ದಾರೆ.