November 8, 2025
WhatsApp Image 2023-10-02 at 4.02.33 PM

ಪುತ್ತೂರು: ಮಾಜಿ ಶಾಸಕನ ಅರೆನಗ್ನ ಫೋಟೊ ವೈರಲ್ ಬೆನ್ನಲ್ಲೇ ಇದೀಗ ಬಿಜೆಪಿ ಕಾರ್ಯಕರ್ತನೋರ್ವನ ಅರೆನಗ್ನ ಫೋಟೊ ವೈರಲ್ ಆಗಿದೆ. ಬಿಜೆಪಿ ಕಾರ್ಯಕರ್ತ ನವೀನ್ ರೈ ಕೈಕಾರ ಮಹಿಳೆಯೊಂದಿಗೆ ರೂಂ ಒಂದರಲ್ಲಿ ಸೆಲ್ಫೀ ಕ್ಷಿಕ್ಕಿಸಿರುವ ಫೋಟೊ ವೈರಲ್ ಆಗುತ್ತಿದೆ.

ಪುತ್ತೂರಿನ ಮಾಜಿ ಶಾಸಕ ಸಂಜೀವ ಮಠಂದೂರು ಆಪ್ತ ವಲಯದಲ್ಲಿ ಗುರುತಿಸಿಕೊಂಡಿರೋ, ಒಳಮೊಗ್ರು ಗ್ರಾಮದ ಕೈಕಾರ ಸಮೀಪದ ಪನಡ್ಕ ನಿವಾಸಿ ನವೀನ್ ರೈ ಅವರ ಫೋಟೊ ವೈರಲ್‌ ಆಗುತ್ತಿದೆ. ಈ ಹಿನ್ನೆಲೆಯಲ್ಲಿ ನವೀನ್ ರೈ ಕೈಕಾರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದು, ತನ್ನ ಫೋಟೋವನ್ನ ಬೇರೆ ಯುವತಿಯೊಬ್ಬಳ ಜತೆ ಇರುವಂತೆ ಎಡಿಟ್ ಮಾಡಿ ವೈರಲ್ ಮಾಡಿ ಮಾನಹಾನಿ ಮಾಡಲಾಗಿದೆ ಫೋಟೋವನ್ನು ದಿನೇಶ್ ಪುತ್ತೂರು ಎಂಬವರು ಪುತ್ತಿಲ ಪರಿವಾರ -1ಎಂಬ ವಾಟ್ಸಾಪ್ ಗ್ರೂಪಿನಲ್ಲಿ ಶೇರ್‌ ಮಾಡಿದ್ದಾರೆ ಎಂದು ಮಾನಹಾನಿ ದೂರು ದಾಖಲಿಸಿದ್ದಾರೆ.

About The Author

Leave a Reply