Visitors have accessed this post 80 times.
ನವದೆಹಲಿ: ನೇಪಾಳದಲ್ಲಿ ಭೂಕಂಪ ಸಂಭವಿಸಿದ ಬಳಿಕ ದೆಹಲಿ-ಎನ್‌ಸಿಆರ್, ಪಂಜಾಬ್, ಹರಿಯಾಣ ಮತ್ತು ಉತ್ತರ ಪ್ರದೇಶ ಸೇರಿದಂತೆ ಉತ್ತರ ಭಾರತದ ಹಲವು ಭಾಗಗಳಲ್ಲಿ ಮಂಗಳವಾರ ಮಧ್ಯಾಹ್ನ ಪ್ರಬಲ ಭೂಕಂಪನದ ಅನುಭವವಾಗಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್‌ಸಿಎಸ್) ತಿಳಿಸಿದೆ.
ಎರಡು ಭಾರಿ ಕಂಪನದ ಅನುಭವಾಗಿದ್ದು ರಿಕ್ಟರ್ ಮಾಪನದಲ್ಲಿ ಮಧ್ನಾಹ್ನ 2.25ಕ್ಕೆ ರಿಕ್ಟರ್ ಮಾಪಕದಲ್ಲಿ 4.6 ತೀವ್ರತೆಯ ಭೂಕಂಪ ಸಂಭವಿಸಿದೆ. ಇದಾದ 25 ನಿಮಿಷಗಳ ಅಂತರದಲ್ಲಿ 6.2 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ತಿಳಿಸಿದೆ.
ದೆಹಲಿ-ಎನ್‌ಸಿಆರ್, ಪಂಜಾಬ್ ಮತ್ತು ಹರಿಯಾಣ ಸೇರಿದಂತೆ ಉತ್ತರ ಭಾರತದ ಹಲವಾರು ಪ್ರದೇಶದಲ್ಲಿ ಪ್ರಬಲ ಭೂಕಂಪನದ ಅನುಭವವಾಗಿದ್ದು ಜನ ತಮ್ಮ ಕಟ್ಟಡಗಳಿಂದ ಹೊರಗೆ ಓಡಿ ಬಂದಿದ್ದಾರೆ ಇದು ಸುಮಾರು ಒಂದು ನಿಮಿಷಗಳ ಕಾಲ ಇತ್ತೆಂದು ಹೇಳಲಾಗಿದೆ.
ಘಟನೆಯಲ್ಲಿ ಯಾವುದೇ ಸಾವು ನೋವು ಸಂಭವಿಸಿದ ಬಗ್ಗೆ ವರದಿಯಾಗಿಲ್ಲ.