Visitors have accessed this post 917 times.
ಬೆಳ್ತಂಗಡಿ: ಬೆಳ್ತಂಗಡಿಯ ನೆರಿಯ ಗ್ರಾಮ ಪಂಚಾಯತ್ ನ ದ್ವಿತೀಯ ಅವಧಿಯ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಯಲ್ಲಿ ಪಕ್ಷದ ಆದೇಶವನ್ನು ಉಲ್ಲಂಘಿಸಿದ ಹಿನ್ನಲೆಯಲ್ಲಿ ನೆರಿಯ ಗ್ರಾಮ ಪಂಚಾಯತ್ ಮೂವರು ಸದಸ್ಯರನ್ನ ಅಮಾನತು ಮಾಡಲಾಗಿದೆ.
ಬಿಜೆಪಿ ಪಕ್ಷದ ಜವಾಬ್ದಾರಿಯನ್ನು ಹೊಂದಿರುವ ಎಸ್.ಸಿ. ಮೋರ್ಚಾ ಪ್ರಧಾನ ಕಾರ್ಯದರ್ಶಿ ವಸಂತಿ ಕಡ್ಡಿಬಾಗಿಲು ಮನೆ( ನೆರಿಯ ಗ್ರಾಮ ಪಂಚಾಯತ್ ಹಾಲಿ ಅಧ್ಯಕ್ಷೆ), ನೆರಿಯ ಗ್ರಾಮದ ಬೂತ್ ಸಮಿತಿ ಅಧ್ಯಕ್ಷರಾದ ಕುಶಾಲ ಕಡ್ಡಿಬಾಗಿಲು ಮನೆ( ಹಾಲಿ ನೆರಿಯ ಗ್ರಾಮ ಪಂಚಾಯತ್ ಸದಸ್ಯೆ), ನೆರಿಯ ಗ್ರಾಮ ಬೂತ್ ಸಮಿತಿ ಅಧ್ಯಕ್ಷರಾದ ಸಚಿನ್ ಅಣಿಯೂರು ಕುಲೆನಾಡಿ ಮನೆ(ಹಾಲಿ ನೆರಿಯ ಗ್ರಾಮ ಪಂಚಾಯತ್ ಸದಸ್ಯ) ಇವರನ್ನು ತಕ್ಷಣದಿಂದ ಅನ್ವಯವಾಗುವಂತೆ ಭಾರತೀಯ ಜನತಾ ಪಾರ್ಟಿಯ ಎಲ್ಲಾ ಹುದ್ದೆ ಹಾಗೂ ಜವಾಬ್ದಾರಿಗಳಿಂದ ಮುಕ್ತಗೊಳಿಸಿರುವುದಾಗಿ ಬೆಳ್ತಂಗಡಿ ಬಿಜೆಪಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್ ಪ್ರಕಟಣೆಯಲ್ಲಿ ತಿಳಿಸಿದೆ.