August 30, 2025
WhatsApp Image 2023-10-05 at 2.13.02 PM

ಕಾಸರಗೋಡು: ವಿವಾಹ ಭರವಸೆ ನೀಡಿ ಯುವತಿಯೋರ್ವಳಿಗೆ ಕಿರುಕುಳ ನೀಡಿದ ಬಗ್ಗೆ ಲಭಿಸಿದ ದೂರಿನಂತೆ ಬಿಗ್ ಬಾಸ್ ನಟ ಶಿಯಾಝ್ ಕರೀಂ (34)ನನ್ನು ಕಾಸರಗೋಡು ಚಂದೇರ ಠಾಣಾ ಪೊಲೀಸರು ಬಂಧಿಸಿದ್ದಾರೆ

ವಿದೇಶದಿಂದ ಬಂದಿಳಿದ ಶಿಯಾಝ್ ನನ್ನು ಕಾಸರಗೋಡು ಪೊಲೀಸರು ಚೆನ್ನೈ ವಿಮಾನ ನಿಲ್ದಾಣದಿಂದ ಬಂಧಿಸಿದ್ದಾರೆ.

ಶಿಯಾಝ್ ವಿರುದ್ಧ ಪೊಲೀಸರು ಲುಕ್ ಔಟ್ ನೋಟಿಸ್ ಬಿಡುಗಡೆ ಗೊಳಿಸಲಾಗಿತ್ತು. ಕಾಸರಗೋಡು ಪಡನ್ನ ದ 32 ರ ಹರೆಯದ ಯುವತಿ ನೀಡಿದ ದೂರಿನಂತೆ ಚಂದೇರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.

ಶಿಯಾಝ್ ಬಿಗ್ ಬಾಸ್ ರಿಯಾಲಿಟಿ ಶೋ ಗಳಲ್ಲಿ ಪಾಲ್ಗೊಂಡಿದ್ದರು. ಎರ್ನಾಕುಲಂ ನ ಜಿಮ್ ವೊಂದರಲ್ಲಿ ಕೆಲಸಕ್ಕಿದ್ದ ದೂರುದಾತೆಗೆ ವಿವಾಹವಾಗುವ ಭರವಸೆ ನೀಡಿ ಹಲವು ಕಡೆಗಳಿಗೆ ಕರೆದೊಯ್ದು ಕಿರುಕುಳ ನೀಡಿರುವುದಾಗಿ ದೂರಿನಲ್ಲಿ ತಿಳಿಸಿದ್ದರು.

ಶಿಯಾಝ್ ಸುಮಾರು 11 ಲಕ್ಷ ರೂ.ಪಡೆದು ವಂಚಿಸಿದ್ದಾಗಿ ದೂರಿನಲ್ಲಿ ತಿಳಿಸಲಾಗಿದೆ. 2021 ರಿಂದ 2023 ರ ತನಕ ಮೂರು ವರ್ಷ ಗಳಲ್ಲಿ ಎರ್ನಾಕುಲಂ, ಮುನ್ನಾರ್ ರೆಸಾರ್ಟ್ ಹಾಗೂ ಇನ್ನಿತರ ಕಡೆಗಳಿಗೆ ಕರೆದೊಯ್ದು ಕಿರುಕುಳ ನೀಡಿರುವುದಾಗಿ ದೂರಿನಲ್ಲಿ ತಿಳಿಸಿದ್ದಳು. ಈ ನಡುವೆ ಬೇರೆ ಯುವತಿಯ ಜೊತೆ ವಿವಾಹ ನಿಶ್ಚಯ ಕುರಿತು ಶಿಯಾಝ್ ಸಾಮಾಜಿಕ ಜಾಲತಾಣ ಗಳಲ್ಲಿ ಪ್ರಕಟಿಸಿದ್ದು, ವಿವಾಹ ಭರವಸೆ ನೀಡಿ ತನ್ನನ್ನು ವಂಚಿಸಿರುವುದಾಗಿ ಆರೋಪಿಸಿ ಪೊಲೀಸರಿಗೆ ದೂರು ಲಭಿಸಿತ್ತು.

About The Author

Leave a Reply