
ನವದೆಹಲಿ: ಮಿಜೋರಾಂ, ಛತ್ತೀಸ್‌ಗಢ, ಮಧ್ಯಪ್ರದೇಶ, ರಾಜಸ್ಥಾನ ಮತ್ತು ತೆಲಂಗಾಣ ಐದು ರಾಜ್ಯಗಳಲ್ಲಿ ನಡೆಯುವ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗವು ಇಂದು ಘೋಷಿಸಲಿದೆ.



ಚುನಾವಣಾ ಸಮಿತಿಯು ಇಂದು (ಸೋಮವಾರ) ಮಧ್ಯಾಹ್ನ 12 ಗಂಟೆಗೆ ಪತ್ರಿಕಾಗೋಷ್ಠಿಯನ್ನು ಕರೆದಿದ್ದು, ಈ ವೇಳೆ ಮತದಾನದ ದಿನಾಂಕ, ಹಂತಗಳ ಸಂಖ್ಯೆ ಮತ್ತು ನಾಮಪತ್ರಗಳನ್ನು ಸಲ್ಲಿಸುವ ಮತ್ತು ಹಿಂತೆಗೆದುಕೊಳ್ಳುವ ದಿನಾಂಕಗಳನ್ನು ಪ್ರಕಟಿಸಲಿದೆ ಎಂದು ಹೇಳಿದೆ.
ಈ ಐದು ರಾಜ್ಯಗಳಲ್ಲಿನ ಶಾಸಕಾಂಗ ಸಭೆಗಳ ಅವಧಿಯು ಡಿಸೆಂಬರ್ 2023 ಮತ್ತು ಜನವರಿ 2024 ರ ನಡುವೆ ಮುಕ್ತಾಯಗೊಳ್ಳಲಿದೆ. ಚುನಾವಣಾ ಆಯೋಗ ಸಾಮಾನ್ಯವಾಗಿ ಶಾಸಕಾಂಗ ಸಭೆಯ ಅವಧಿ ಮುಗಿಯುವ ಆರರಿಂದ ಎಂಟು ವಾರಗಳ ಮೊದಲು ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸುತ್ತದೆ.
ಮುಂಬರುವ ವಿಧಾನಸಭಾ ಚುನಾವಣೆಯು ಆಡಳಿತಾರೂಢ ಪಕ್ಷ ಬಿಜೆಪಿ, ಪ್ರಮುಖ ವಿರೋಧ ಪಕ್ಷವಾದ ಕಾಂಗ್ರೆಸ್ ಮತ್ತು ಪ್ರಾದೇಶಿಕ ಪಕ್ಷಗಳು ಸೇರಿದಂತೆ ಎಲ್ಲಾ ಪ್ರಮುಖ ರಾಜಕೀಯ ಪಕ್ಷಗಳಿಗೆ ಪ್ರಮುಖ ಪರೀಕ್ಷೆಯಾಗಿದೆ.