Visitors have accessed this post 227 times.
ಸುಬ್ರಹ್ಮಣ್ಯ: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಮತ್ತು ಅವರ ಪತ್ನಿ ಚಿನ್ನಮ್ಮ ಅವರು ಇಂದು ಬೆಳ್ಳಗ್ಗೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಆಗಮಿಸಿದ್ದಾರೆ.
ಭಾನುವಾರ ರಾತ್ರಿ ಸುಬ್ರಹ್ಮಣ್ಯಕ್ಕೆ ಆಗಮಿಸಿರುವ ದೇವೇಗೌಡರ ಕುಟುಂಬ ಅ.9ರ ಸೋಮವಾರ ಬೆಳಗ್ಗೆ ಶ್ರೀ ದೇವರ ದರ್ಶನ ಪಡೆದು, ಕ್ಷೇತ್ರದಲ್ಲಿ ಇಂದು ವಿವಿಧ ಸೇವೆ ನೆರವೇರಿಸಲಿದ್ದಾರೆ.
ಇನ್ನು ದೇವೇಗೌಡರು ನಿನ್ನೆ ಮಧ್ಯಾಹ್ನ ಬೆಂಗಳೂರಿನ ಹೆಚ್.ಎ.ಎಲ್. ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸುವ ನಿರೀಕ್ಷೆ ಇತ್ತು. ಆದರೆ ಸಕಲೇಶಪುರ ಮತ್ತು ಕುಕ್ಕೆ ಸುಬ್ರಹ್ಮಣ್ಯ ಕಡೆಗಳಲ್ಲಿ ದಟ್ಟವಾದ ಮೋಡ ಕವಿದ ವಾತಾವರಣವಿದ್ದ ಹಿನ್ನೆಲೆ ರಾತ್ರಿ ವಿಮಾನದ ಮೂಲಕ ಮಂಗಳೂರಿಗೆ ಆಗಮಿಸಿ ಬಳಿಕ ರಸ್ತೆ ಮಾರ್ಗವಾಗಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿ ಇಲ್ಲಿ ವಾಸ್ತವ್ಯ ಹೂಡಿದ್ದಾರೆ.