
ಬ್ರಹ್ಮಾವರ: ತಾಲೂಕಿನ ಪೆಜಮಂಗೂರು ಗ್ರಾಮದ ಮೊಗವೀರಪೇಟೆಯಲ್ಲಿ ಕ್ಷುಲ್ಲಕ ಕಾರಣಕ್ಕಾಗಿ ತಂದೆಯನ್ನು ಕತ್ತಿಯಿಂದ ಕಡಿದು ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಮಗನನ್ನು ಬ್ರಹ್ಮಾವರ ಪೊಲೀಸರು ಬಂಧಿಸಿದ್ದಾರೆ. ಆನಂದ ಮರಕಾಲ(50) ಬಂಧಿತ ಆರೋಪಿ. ಈತನನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ನ್ಯಾಯಾಲಯ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ. ಈತ ತನ್ನ ತಂದೆ ಸಾಧು ಮರಕಾಲ(68) ಅವರನ್ನು ಅಕ್ಟೋಬರ್ 7ರಂದು ಮಧ್ಯಾಹ್ನ ಮನೆಯಲ್ಲಿ ಕತ್ತಿಯಿಂದ ಕಡಿದು ಪರಾರಿಯಾಗಿದ್ದ. ತನಿಖಾಧಿಕಾರಿ ಬ್ರಹ್ಮಾವರ ಪೊಲೀಸ್ ವೃತ್ತ ನಿರೀಕ್ಷಕ ದಿವಾಕರ್ ಪಿ.ಎಂ. ನೇತೃತ್ವದಲ್ಲಿ ಆರೋಪಿಯನ್ನು ಉಪ್ಪರು ಎಂಬಲ್ಲಿ ಬಂಧಿಸಲಾಗಿದೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


