ಪುತ್ತೂರು: ಕಾಲೇಜು ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ..!

ಪುತ್ತೂರು : ಕಾಲೇಜು ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಮೃತರನ್ನು ಕುರಿಯ ಪಡ್ಪು ನಿವಾಸಿ, ಫಿಲೋಮಿನಾ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ವೀಕ್ಷಿತ್ (17) ಎಂದು ಗುರುತಿಸಲಾಗಿದೆ. ವೀಕ್ಷಿತ್ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮೃತರು ತಂದೆ, ತಾಯಿ, ಸಹೋದರ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ. ಘಟನೆ ಬಗ್ಗೆ ತಿಳಿಯುತ್ತಿದ್ದಂತೆ ಬಿಜೆಪಿ ಮುಖಂಡ ಬೂಡಿಯಾರ್ ರಾಧಾಕೃಷ್ಣ ರೈ ಅವರು ಸ್ಥಳಕ್ಕೆ ಭೇಟಿ ನೀಡಿದ್ದು, ಸಂಪ್ಯ ಪೊಲೀಸರಿಗೂ ಮಾಹಿತಿ ನೀಡಲಾಗಿದೆ ಎಂದು ವರದಿಯಾಗಿದೆ.

Leave a Reply