ಪುತ್ತೂರು: ಅನಿತಾ ಬೀಡಿ ವರ್ಕ್ ಕಂಪೆನಿ ಮಾಲೀಕರ ಮನೆ ಮೇಲೆ ಐಟಿ ದಾಳಿ ನಡೆದಿದೆ.
ಉಪ್ಪಿನಂಗಡಿ ಸಮೀಪದ ಪೆರ್ನೆ ಎಂಬಲ್ಲಿರುವ ಅನಿತಾ ಬೀಡಿ ವರ್ಕ್ಸ್ ಮಾಲೀಕರ ಮಹಮ್ಮದ್ ಆಲಿ ಯಾನೆ ಮಮ್ಮು ಅವರ ಮನೆ ಮೇಲೆ ಐಟಿ ಇಲಾಖೆಯ ಅಧಿಕಾರಿಗಳು ದಾಳಿ ಮಾಡಿ ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ.
ದಕ್ಷಿಣಕನ್ನಡ ಜಿಲ್ಲೆಯ ಉಪ್ಪಿನಂಗಡಿ ಸಮೀಪದ ಪೆರ್ನೆ ಸಮೀಪ ಇರುವ ಅವರ ಮನೆ ಬಳಿಯೇ ಅನಿತಾ ಬೀಡಿ ಕಂಪೆನಿ ಕಾರ್ಯ ನರ್ವಹಿಸುತ್ತಿದೆ. ಆದಾಯ ತೆರಿಗೆ ಇಲಾಖೆಯ ಹಲವು ಅಧಿಕಾರಿಗಳಿಂದ ಮನೆ ಮತ್ತು ವರ್ಕ್ ಶಾಪ್ ಗೆ ಏಕ ಕಾಲಕ್ಕೆ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ.