ಚಿಕ್ಕಬಳ್ಳಾಪುರ: ಅನ್ಯಜಾತಿಯ ಯುವಕನನ್ನು ಪ್ರೀತಿಸುತ್ತಿದ್ದಳೆಂಬ ಕಾರಣಕ್ಕೆ ಮುದ್ದು ಮಗಳ ಕತ್ತನ್ನೇ ಕೊಯ್ದು ತಂದೆ ಕೊಲೆ ಮಾಡಿದ ಘಟನೆ ಬುಧವಾರ ತಡರಾತ್ರಿ ದೇವನಹಳ್ಳಿಯ ಬಿದಲೂರು ಗ್ರಾಮದಲ್ಲಿ ನಡೆದಿದೆ.
ಕವನ (20) ಮೃತ ದುರ್ದೈವಿ ಯುವತಿಯಾಗಿದ್ದಾಳೆ, ಆರೋಪಿ ತಂದೆ ಮಂಜುನಾಥ್ (47) ಕೊಲೆ ಮಾಡಿ ಪೋಲಿಸರಿಗೆ ಶರಣಾಗಿದ್ದಾನೆ. ಮಗಳು ಪ್ರೀತಿ ಮಾಡುತ್ತಿದ್ದ ವಿಷಯ ತಿಳಿದು ಆಕ್ರೋಶಗೊಂಡಿದ್ದ ಚಿಕನ್ ಅಂಗಡಿ ಇಟ್ಟುಕೊಂಡಿದ್ದ ತಂದೆ ಮಂಜುನಾಥ್ ಕೋಳಿ ಕತ್ತರಿಸುವ ಕತ್ತಿಯಿಂದಲೇ ಮಗಳ ಕತ್ತು ಕೊಯ್ದು ಕೊಲೆ ಮಾಡಿದ್ದಾನೆ,
ಸ್ಥಳಕ್ಕೆ ವಿಶ್ವನಾಥಪುರ ಪೋಲಿಸರು ಭೇಟಿ ಪರಿಶೀಲಿಸಿದ್ದು, ಬಳಿಕ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿ ಮಂಜುನಾಥ್ ಕಿರಿಯ ಮಗಳು ಪ್ರೀತಿಸಿ ಬೇರೊಬ್ಬ ಯುವಕನೊಂದಿಗೆ ಪರಾರಿಯಾಗಿದ್ದಳು. ಈ ಹಿನ್ನೆಲೆಯಲ್ಲಿ ಹಿರಿಯ ಮಗಳ ಜೊತೆ ತಡರಾತ್ರಿ ಗಲಾಟೆ ನಡೆದಿತ್ತು. ಚಿಕ್ಕವಳು ಓಡಿ ಹೋದಳು, ನೀನೂ ಸಹ ಅನ್ಯಜಾತಿ ಯವಕನನ್ನ ಪ್ರೀತಿ ಮಾಡ್ತಿದ್ದೀಯಾ? ನಾವು ಊರಲ್ಲಿ ಹೇಗೆ ಮರ್ಯಾದೆಯಿಂದ ಒಡಾಡಬೇಕು ತಾ ಮಗಳನ್ನ ಕೊಂದೇಬಿಟ್ಟಿದ್ದಾನೆ ಎಂದು ಪೋಲಿಸರು ಮಾಹಿತಿ ನೀಡಿದ್ದಾರೆ.