Visitors have accessed this post 387 times.
ಬೆಂಗಳೂರು: ಕಾಂಗ್ರೆಸ್ ಚುನಾವಣಾ ಪ್ರಚಾರಕ್ಕೆ ‘ದೊಡ್ಡಮಟ್ಟದಲ್ಲಿ ಸಹಕರಿಸಿದ’ ಋಣವನ್ನು ತೀರಿಸಲು ಹಾಗೂ ಲೋಕಸಭಾ ಚುನಾವಣೆಯ ಬಳಿಕ ಸಿಎಂ ಕುರ್ಚಿಗೆ ಲಾಬಿ ಮಾಡಲು, ಕಾವೇರಿಯನ್ನು ಸ್ಟಾಲಿನ್ ನಾಡಿಗೆ ಬೇಕಾಬಿಟ್ಟಿಯಾಗಿ ಹರಿಬಿಟ್ಟು ಜಲಸಂಪನ್ಮೂಲ ಸಚಿವ ಡಿ.ಕೆ ಶಿವಕುಮಾರ್ ಅವರು ನಾಪತ್ತೆಯಾಗಿದ್ದಾರೆ ಅಂಥ ರಾಜ್ಯ ಬಿಜೆಪಿ ರಾಜ್ಯ ಘಟಕ ಟ್ವಿಟ್ ಮಾಡಿದೆ.
ಇದೇ ವೇಳೆ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯಾದರೆ, ತಾನು ಮಾಡುವ ಕಿತಾಪತಿಗಳಿಗೆ ಜಾಗ ಇರುವುದಿಲ್ಲವೆಂಬುದೇ, ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ಸಂಬಂಧಿಸಿದಂತೆ ಕಾಂಗ್ರೆಸ್‌ಗಿದ್ದ ಪ್ರಮುಖ ಅಸಮಾಧಾನ. ಭಾರತದ ಶಿಕ್ಷಣ ಕ್ಷೇತ್ರದಲ್ಲಿ ಸುಧಾರಣೆ ತರಲು ಕಾಂಗ್ರೆಸ್ ಯಾವುದೇ ಪ್ರಮುಖ ನೀತಿಯನ್ನು ಇದುವರೆಗೆ ಜಾರಿಗೆ ತಂದಿಲ್ಲ. ಈ ಹಿಂದೆ ಯುಪಿಎ ಸರ್ಕಾರ ಜಾರಿಗೆ ತಂದಿದ್ದ ಶಿಕ್ಷಣ ಹಕ್ಕು (ಆರ್‌ಟಿಇ) ಕಾಯಿದೆಯಿಂದ ರಾಜ್ಯ ಸರ್ಕಾರಗಳಿಗೆ ಹೆಚ್ಚಿನ ಆರ್ಥಿಕ ಹೊರೆ ಉಂಟಾಯಿತೇ ವಿನಹ ಶೈಕ್ಷಣಿಕ ಕ್ಷೇತ್ರಕ್ಕಾದ ಪ್ರಯೋಜನ ಶೂನ್ಯ ಅಂಥ ಕಿಡಿಕಾರಿದೆ.
ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ಯೋಜನೆಗಳನ್ನು ರದ್ದುಪಡಿಸಬೇಕು ಹಾಗೂ ದ್ವೇಷ ರಾಜಕಾರಣ ಮಾಡಬೇಕು ಎಂಬ ಟೂಲ್ ಕಿಟ್ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾಂಗ್ರೆಸ್ ಸರ್ಕಾರ, ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರದ್ದುಗೊಳಿಸುತ್ತಿರುವುದು ಸಹ ದ್ವೇಷದ ರಾಜಕಾರಣಕ್ಕಾಗಿ. ಕರ್ನಾಟಕದ ಎಲ್ಲಾ 30 ವಿಶ್ವವಿದ್ಯಾಲಯದ ಕುಲಪತಿಗಳು ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರದ್ದುಗೊಳಿಸದೆ ಮುಂದುವರೆಸಿ ಎಂದು ಆಗ್ರಹಿಸಿದರೂ, ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಯಾವ ಪುರುಷಾರ್ಥದ ಸಾಧನೆಗೆ ಕಾಂಗ್ರೆಸ್ ರದ್ದುಗೊಳಿಸಿದೆ ಎಂಬ ಪ್ರಶ್ನೆಗೆ ಇದುವರೆಗೂ ಸ್ಪಷ್ಟ ಉತ್ತರ ನೀಡಿಲ್ಲ ಅಂತ ಪ್ರಶ್ನೆ ಮಾಡಿದೆ.