February 18, 2026
WhatsApp Image 2023-10-14 at 12.14.23 PM

ಬಳ್ಳಾರಿ ಜಿಲ್ಲೆಯಲ್ಲಿ ಕಾಲೇಜು ವಿದ್ಯಾರ್ಥಿನಿಯನ್ನು ಅಪಹರಿಸಿ, ಸಾಮೂಹಿಕ ಅತ್ಯಾಚಾರ ಎಸಗಿರುವ ಆಘಾತಕಾರಿ ಘಟನೆ ನಡೆದಿದೆ. ಯುವತಿ ಬಳ್ಳಾರಿಯ ಕಾಲೇಜೊಂದರಲ್ಲಿ ಬಿಕಾಂ ವ್ಯಾಸಂಗ ಮಾಡುತ್ತಿದ್ದು, ನಿಮ್ಮ ಅಣ್ಣ ಬಂದಿದ್ದಾನೆಂದು ವಿದ್ಯಾರ್ಥಿನಿಯನ್ನು ಕಾಲೇಜಿನಿಂದ ಹೊರಕ್ಕೆ ಕರೆಯಿಸಿ ನಂತರ ಆಕೆಯನ್ನು ಬಲವಂತವಾಗಿ ಆಟೋದಲ್ಲಿ ಹತ್ತಿಸಿಕೊಂಡು ಕೊಪ್ಪಳ ಜಿಲ್ಲೆಯ ಸಣಾಪುರದ ಹೋಟೆಲ್ ಕೊಠಡಿಗೆ ಕರೆದೊಯ್ದಿದ್ದಾರೆ.

ಅಲ್ಲಿ ಆಕೆಗೆ ಮಾದಕ ದ್ರವ್ಯ ಬೆರೆಸಿದ ಬಿಯರ್ ಕುಡಿಸಿ, . ಯುವತಿ ಪ್ರಜ್ಞೆ ತಪ್ಪುತ್ತಿದ್ದಂತೆ ಆರೋಪಿಗಳು ಸಾಮೂಹಿಕ ಅತ್ಯಾಚಾರ ಎಸಗಿ ಪರಾರಿಯಾಗಿದ್ದಾರೆ ಎನ್ನಲಾಗಿದೆ. ಇನ್ನೂ ಇದೇ ವೇಳೆ ಪ್ರಜ್ಞೆ ಬರುತ್ತಿದ್ದ ಹಾಗೇ ಸಂತ್ರಸ್ತೆ ನವೀನ್, ಸಕೀಬ್, ತನು ಹಾಗೂ ಮತ್ತೊಬ್ಬ ವ್ಯಕ್ತಿಯ ವಿರುದ್ಧ ದೂರು ದಾಖಲಿಸಿದ್ದು, ಯುವತಿ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಆರೋಪಿಗಳಿಗಾಗಿ ಶೋಧ ಕಾರ್ಯ ಕೈಗೊಂಡಿದ್ದಾರೆ.

About The Author

Leave a Reply