Visitors have accessed this post 760 times.
ವಿಟ್ಲ : ಪಿಕಪ್ ವಾಹನವನ್ನು ಕದ್ದ 8 ಮಂದಿ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರನ್ನು ಕೇರಳ ಮೂಲದ ರಂಷನ್ ಯಾನೆ ಸಾನು, ಜುನ್ಸಿಫ್, ನೌಫಲ್, ಹಂಸಕ್, ತಬ್ರಿಜ, ಮೊಹಮ್ಮದ್ ಉಸೈನ್, ಹ್ಯಾರಿಸ್, ಮೊಹಮ್ಮದ್ ಅಯೂಬ ಖಾನ್ ಎಂದು ಗುರುತಿಸಲಾಗಿದೆ. ಆರೋಪಿಗಳು ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಕುಡ್ತಮುಗೇರು ಎಂಬಲ್ಲಿ ನಿಲ್ಲಿಸಲಾಗಿದ್ದ ಪಿಕ್ ಅಪ್ ವಾಹನ ಕಳ್ಳತನ ಮಾಡಿದ್ದರು. ಈ ಕುರಿತಂತೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಗಳನ್ನು ಬಂಧಿಸಿರುವ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.