ಭಾರಿ ಮಳೆ: ಜಲಾವೃತಗೊಂಡ ಕೇರಳ…!!

ತಿರುವನಂತಪುರ : ಕೇರಳದಲ್ಲಿ ಇದೀಗ ಹಿಂಗಾರು ಮಳೆ ಅಬ್ಬರ ಜೊರಾಗಿದ್ದು, ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಕೇರಳದ ಹಲವು ಭಾಗಗಳಲ್ಲಿ ಪ್ರವಾಸ ಸ್ಥಿತಿ ಎದುರಾಗಿದ್ದು, ತಿರುವನಂತಪುರದಲ್ಲಿ ಶಾಲಾ ಕಾಲೇಜುಗಳಿಗೆ ಸೋಮವಾರ ರಜೆ ಘೋಷಿಸಲಾಗಿದೆ.

ಶನಿವಾರ ರಾತ್ರಿಯಿಂದ ಭಾರೀ ಮಳೆಯು ತಿರುವನಂತಪುರಂ ಜಿಲ್ಲೆಯಲ್ಲಿ ಜಲಾವೃತಗೊಂಡಿದ್ದು, ಬೀದಿಗಳು, ರಸ್ತೆಗಳು ಮತ್ತು ತಗ್ಗು ಪ್ರದೇಶಗಳು ಜಲಾವೃತವಾಗಿವೆ. ನೀರು ನುಗ್ಗಿದ ಮನೆಗಳಿಂದ ಜನರನ್ನು ರಕ್ಷಣಾ ಸಿಬ್ಬಂದಿ ದೋಣಿಯ ಮೂಲಕ ಶಿಬಿರಗಳಿಗೆ ಸ್ಥಳಾಂತರಿಸಿದ್ದಾರೆ. ಈ ನಡುವೆ, ಕೇಂದ್ರ ಜಲ ಆಯೋಗವು ತಿರುವನಂತಪುರಂ ಜಿಲ್ಲೆಯ ಕರಮಾನ, ನೆಯ್ಯರ್ ಮತ್ತು ವಾಮನಪುರ ನದಿಗಳಲ್ಲಿ ನೀರಿನ ಪ್ರಮಾಣ ಹೆಚ್ಚುವ ಸಾಧ್ಯತೆ ಇದೆ ಎಂದು ಪ್ರವಾಹದ ಎಚ್ಚರಿಕೆ ನೀಡಿದೆ.ತಿರುವನಂತಪುರ, ಕೊಲ್ಲಂ, ಪತ್ತನಂತಿಟ್ಟ ಮತ್ತು ಆಲಪ್ಪುಳ ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಭಾನುವಾರ ಆರೆಂಜ್ ಅಲರ್ಟ್ ಘೋಷಿಸಿದ್ದು, ರಾಜ್ಯದ ಎಂಟು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮುಂದಿನ ದಿನಗಳಲ್ಲಿ ರಾಜ್ಯದ ಹಲವೆಡೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ.

Leave a Reply