BREAKING: AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ‘ನಿಗಮ-ಮಂಡಳಿ’ ನೇಮಕಕ್ಕೆ ಗ್ರೀನ್ ಸಿಗ್ನಲ್

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತ್ರ ಕೆಲ ನಿಗಮ ಮಂಡಳಿಗಳಿಗೆ ಅಧ್ಯಕ್ಷರು, ಉಪಾಧ್ಯಕ್ಷರನ್ನು ನೇಮಕ ಮಾಡಲಾಗಿತ್ತು. ಇನ್ನೂ ಕೆಲವು ಹಾಗೆ ಬಾಕಿ ಇದ್ದಾವೆ. ಇಂತಹ ನಿಗಮ-ಮಂಡಳಿಗಳ ನೇಮಕಾತಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಗ್ರೀನ್ ಸಿಗ್ನಲ್ ನೀಡಿದ್ದಾರೆ.

ಬೆಂಗಳೂರಲ್ಲಿ ಇಂದು ಈ ಕುರಿತಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಿತು. ಇಂದಿನ ಸಭೆಯಲ್ಲಿ ನಿಗಮ-ಮಂಡಳಿಗಳ ನೇಮಕಾತಿ ಸಂಬಂಧಿಸಿದಂತೆ ಬಿಸಿಬಿಸಿ ಚರ್ಚೆ ನಡೆಯಿತು. ಅಂತಿಮವಾಗಿ ಈ ತಿಂಗಳ ಅಂತ್ಯಕ್ಕೆ ಇಲ್ಲವೇ ಮುಂದಿನವಾರ ನಿಗಮ ಮಂಡಳಿಗಳ ನೇಮಕಾತಿ ಕೈಗೊಳ್ಳೋದಕ್ಕೆ ಅನುಮತಿಸಿದೆ ಎನ್ನಲಾಗುತ್ತಿದೆ.

ಈಗಾಗಲೇ ಡಿಸಿಎಂ ಡಿಕೆ ಶಿವಕುಮಾರ್ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಿಗೆ ನಿಗಮ-ಮಂಡಳಿಗಳಿಗೆ ನೇಮಕ ಮಾಡೋದಾಗಿ ತಿಳಿಸಿದ್ದರು. ಇದೇ ವಿಚಾರವಾಗಿ ಸಿಎಂ ಸಿದ್ಧರಾಮಯ್ಯ ಹಾಗೂ ಡಿಸಿಎಂ ನಡುವೆ ಕೆಲ ಗೊಂದವಿತ್ತು. ಇಂದಿನ ಸಭೆಯಲ್ಲಿ ಆ ಗೊಂದಲಕ್ಕೂ ತೆರೆಯನ್ನು ಎಳೆಯಲಾಗಿದೆ ಎಂಬುದಾಗಿ ತಿಳಿದು ಬಂದಿದೆ.

ಅಂತಿಮವಾಗಿ ನಿಗಮ ಮಂಡಳಿಗಳ ನೇಮಕಾತಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಒಪ್ಪಿಗೆ ಸೂಚಿಸಿದ್ದು, ಶಾಸಕರು, ಪರಿಷತ್ ಸದಸ್ಯರು ಹಾಗೂ ಕಾರ್ಯಕರ್ತರನ್ನು ಒಳಗೊಂಡಂತೆ ಪಟ್ಟಿ ತಯಾರಿಸಿ, ಕಳುಹಿಸುವಂತೆ ನಾಯಕರಿಗೆ ಸೂಚಿಸಿದ್ದಾರೆ ಎನ್ನಲಾಗಿದೆ. ಈ ಪಟ್ಟಿ ಮುಂದಿನ ವಾರ ರೆಡಿ ಮಾಡಿ, ಕಾಂಗ್ರೆಸ್ ಹೈಕಮಾಂಡ್ ಒಪ್ಪಿಗೆಗೆ ಕಳುಹಿಸಲಾಗುತ್ತದೆ. ಅಂತಿಮವಾಗಿ ಅನುಮೋದನೆ ಪಡೆದು ಬರೋ ಸಾಧ್ಯತೆ ಇದೆ.

Leave a Reply