
ಕಡಬ : ಹೆರಿಗೆ ನೋವಿನಿಂದ ಬಳಲುತ್ತಿದ್ದ ಮಹಿಳೆಯೋರ್ವರು ಆಂಬ್ಯುಲೆನ್ಸ್ ನಲ್ಲೇ ಮಗುವಿಗೆ ಜನ್ಮ ನೀಡಿದ ಘಟನೆ ಇಲ್ಲಿನ ಪೆರಿಯಡ್ಕ ಎಂಬಲ್ಲಿ ಅ.17 ರಂದು ನಡೆದಿದೆ.



ಶಾಲಿನಿ ಎಂಬವರು ಆಂಬ್ಯುಲೆನ್ಸ್ ನಲ್ಲಿ ಗಂಡು ಮಗುವಿಗೆ ಜನ್ಮ ನೀಡಿದವರಾಗಿದ್ದಾರೆ.ಶಾಲಿನಿ ಅವರು ಹೆರಿಗೆ ನೋವು ಕಾಣಿಸಿಕೊಂಡಿದ್ದು, ಮಾಹಿತಿ ಪಡೆದ ಆಲಂಕಾರು 108 ಆರೋಗ್ಯ ಕವಚ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿ ಆಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದ ವೇಳೆ ಇವರು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ತಾಯಿ ಮತ್ತು ಮಗು ಆರೋಗ್ಯವಾಗಿದ್ದು ಉಪ್ಪಿನಂಗಡಿ ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.