ಮಂಗಳೂರು: ನಗರದ ಶ್ರೀ ಮಂಗಳಾದೇವಿ ದೇವಸ್ಥಾನದ ದಸರಾ ಸಂತೆ ವ್ಯಾಪಾರದಲ್ಲಿ ಮುಸ್ಲಿಮ್ ವ್ಯಾಪಾರಸ್ಥರನ್ನು ದ್ವೇಷಿಸುವ ರೀತಿಯಲ್ಲಿ ಹಿಂದೂ ವ್ಯಾಪಾರಿಗಳ ಅಂಗಡಿಗಳಲ್ಲಿ ಭಗವಾಧ್ವಜ ಅಳವಡಿಸಿರುವ ಹಿನ್ನೆಲೆಯಲ್ಲಿ ವಿಎಚ್ ಪಿ ಮುಖಂಡ ಶರಣ್ ಪಂಪ್ ವೆಲ್ ಮೇಲೆ ಪ್ರಕರಣ ದಾಖಲಾಗಿದೆ. ಶರಣ್ ಪಂಪ್‌ವೆಲ್ ತಮ್ಮ ಬೆಂಬಲಗರೊಂದಿಗೆ ಆಗಮಿಸಿ ಶ್ರೀ ಮಂಗಳಾದೇವಿ ದೇವಸ್ಥಾನದ ಸಂತೆ ವ್ಯಾಪಾರದ ಹಿಂದೂಗಳ ಮಾರಾಟದ ಅಂಗಡಿಗಳ ಮೇಲೆ ಕೇಸರಿ ಧ್ವಜವನ್ನು ಅಳವಡಿಸಿದ್ದರು. ಜೊತೆಗೆ ಎಲ್ಲಾ ಹಿಂದೂಗಳು ತಮಗೆ ಬೇಕಾದ ಅಗತ್ಯ ಸಾಮಗ್ರಿಗಳನ್ನು ಹಿಂದೂ ಸಮುದಾಯದ ವ್ಯಾಪಾರಸ್ಥರ ಅಂಗಡಿಳಲ್ಲಿ ಮಾತ್ರ ಪಡೆದುಕೊಳ್ಳುವಂತೆ ಕರೆ ನೀಡಿದ್ದರು. ಈ ಮೂಲಕ ಭಿನ್ನಕೋಮಿನ ನಡುವೆ ಕೋಮು ಸಾಮರಸ್ಯಕ್ಕೆ ಧಕ್ಕೆ ಉಂಟು ಮಾಡಿರುವುದರಿಂದ ದಕ್ಷಿಣ ಪೊಲೀಸ್ ಠಾಣೆಯ ಕಾನೂನು ಸುವ್ಯವಸ್ಥೆ ವಿಭಾಗದ ಪಿ.ಎಸ್.ಐ ಮನೋಹರ್ ಪ್ರಸಾದ್ ಇವರ ದೂರಿನನ್ವಯ ಶರಣ್ ಪಂಪ್‌ವೆಲ್ ಹಾಗೂ ಇತರರ ವಿರುದ್ಧ ಮಂಗಳೂರು ದಕ್ಷಿಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶ್ರೀ ಮಂಗಳಾದೇವಿ ದೇವಸ್ಥಾನದ ದಸರಾ ಸಂತೆ ವ್ಯಾಪಾರದಲ್ಲಿ ಹಿಂದೂ ವ್ಯಾಪಾರಿಗಳ ಅಂಗಡಿಗಳಲ್ಲಿ ಭಗವಾಧ್ವಜ ಅಳವಡಿಸಿರುವ ಹಿನ್ನೆಲೆಯಲ್ಲಿ ವಿಎಚ್ ಪಿ ಮುಖಂಡ ಶರಣ್ ಪಂಪ್ ವೆಲ್ ಹಾಗೂ ಬಜರಂಗದಳ ಮುಖಂಡರ ಮೇಲೆ ಜಾತ್ಯತೀತ ಪಕ್ಷಗಳ ಸಂಘಟನೆಯ ನಾಯಕರು ಇಂದು ನಗರಕ್ಕೆ ಆಗಮಿಸಿರುವ ಉಸ್ತುವಾರಿ ಸಚಿವ ದಿನೇಶ್ ಗುಂಡುರಾವ್ ಅವರಿಗೆ ದೂರು ನೀಡಿದ್ದರು.