August 30, 2025
d96cfa5d-afbf-411c-bb39-ee6f1b530fd5

ಮಂಗಳೂರು : ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ರಸ್ತೆ ಬದಿಯ ವಿದ್ಯುತ್‌ ಕಂಬ ತಲೆಗೆ ಬಡಿದ ಪರಿಣಾಮ ಬಾಲಕನೋರ್ವ ಮೃತಪಟ್ಟ ಘಟನೆ ಬುಧವಾರ ಸಂಜೆ ದಕ್ಷಿಣ ಕನ್ನಡ ಜಿಲ್ಲೆಯ ಗಡಿ ಕಾಸರಗೋಡು ನಗರ ಹೊರವಲಯದ ಕರಂದಕ್ಕಾಡ್‌ನಲ್ಲಿ ನಡೆದಿದೆ. ಮೃತ ಬಾಲಕನನ್ನು ಮನ್ನಿಪ್ಪಾಡಿಯ ಮನ್ವಿತ್ (15) ಎಂದು ಗುರುತಿಸಲಾಗಿದೆ. ಈತ ಚೆಮ್ನಾಡ್ ಜಮಾಅತ್ ಹೈಯರ್ ಸೆಕೆಂಡರಿ ಶಾಲೆಯ ವಿದ್ಯಾರ್ಥಿಯಾಗಿದ್ದನು. ಶಾಲೆ ಬಿಟ್ಟು ಮನೆಗೆ ತೆರಳಲು ಮಧೂರಿಗೆ ತೆರಳುವ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಕರಂದಕ್ಕಾಡ್ ಬಳಿ ರಸ್ತೆ ಬದಿಯ ಕಂಬಕ್ಕೆ ತಲೆ ಬಡಿದಿದ್ದು, ಕುಸಿದು ಬಿದ್ದ ಮನ್ವಿತ್‌ ನನ್ನು ಕೂಡಲೇ ಕರೆದೊಯ್ದು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟನು ಎಂದು ತಿಳಿದು ಬಂದಿದೆ. ಈ ಬಗ್ಗೆ ಕಾಸರಗೋಡು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

About The Author

Leave a Reply