Visitors have accessed this post 889 times.
ಬೆಂಗಳೂರು: ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರನ್ನು ಪಕ್ಷದಿಂದಲೇ ಉಚ್ಚಾಟನೆ ಮಾಡಲಾಗಿದೆ. ಜೆಡಿಎಸ್ ಕೋರ್ ಕಮಿಟಿ ಸಭೆಯಲ್ಲಿ ಉಚ್ಚಾಟನೆ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜೊತೆ ಜೆಡಿಎಸ್ ದೋಸ್ತಿ ಮಾಡಿದ್ದಕ್ಕೆ ಸಿಎಂ ಇಬ್ರಾಹಿಂ ಅಸಮಾಧಾನಗೊಂಡು ಪಕ್ಷ ವಿರೋಧಿ ಹೇಳಿಕೆ ನೀಡಿದ್ದರು.
ಎಲ್ಲರ ಅಭಿಪ್ರಾಯ ಪಡೆದು ಸಿ.ಎಂ.ಇಬ್ರಾಹಿಂ ಉಚ್ಚಾಟಿಸಿದ್ದೇವೆ ಎಂದು ಪಕ್ಷದ ವರಿಷ್ಠರಾದ ಹೆಚ್ ಡಿ ದೇವಾಗೌಡರು ಹೇಳಿದ್ದಾರೆ.
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಸಿಎಂ ಇಬ್ರಾಹಿಂ ಅವರನ್ನು ಪಕ್ಷದಿಂದ ಉಚ್ಚಾಟಿಸಿ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ. ಹಿಂದಿನ ಅಧ್ಯಕ್ಷರ ಹೇಳಿಕೆಯನ್ನು ನಾನು ಪ್ರಸ್ತಾಪ ಮಾಡುವುದಿಲ್ಲ. ಜೆಡಿಎಸ್ ಕೋರ್ ಕಮಿಟಿ ಸದಸ್ಯರ ಸಭೆ ಕರೆದು ಚರ್ಚೆ ನಡೆಸಿದ್ದೇವೆ.
ಎಲ್ಲರ ಅಭಿಪ್ರಾಯ ಪಡೆದು ಸಿ.ಎಂ.ಇಬ್ರಾಹಿಂ ಉಚ್ಚಾಟಿಸಿದ್ದೇವೆ. ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕುಮಾರಸ್ವಾಮಿ ನೇಮಕ ಮಾಡಿದ್ದೇವೆ ಎಂದರು.