
ಬೆಂಗಳೂರು:ಬಿಜೆಪಿ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಇಂದು ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದಾರೆ.ಇಂದು ಮಧ್ಯಾಹ್ನ 12 ಗಂಟೆಗೆ ಕೆಪಿಸಿಸಿ ಕಚೇರಿಯಲ್ಲಿ ಪೂರ್ಣಿಮಾ ಬಿಜೆಪಿಗೆ ಹೇಳಿ ಕಾಂಗ್ರೆಸ್ ಸೇರಲಿದ್ದಾರೆ. ಪತಿ ಶ್ರೀನಿವಾಸ್ ಕೂಡ ಬಿಜೆಪಿ ತ್ಯಜಿಸಿ ಕಾಂಗ್ರೆಸ್ ಸೇರಲಿದ್ದಾರೆ.



ಬಿಜೆಪಿಯಲ್ಲಿ ನಮ್ಮ ಸಮುದಾಯಕ್ಕೆ ಮಹತ್ವ ನೀಡಲಿಲ್ಲ. ನಾವು 25 ಲಕ್ಷ ಜನ ಇದ್ದೇವೆ. ಸಮುದಾಯದ ಬೇಡಿಕೆಗಳಿಗೆ ಮನ್ನಣೆ ಕೊಡಲಿಲ್ಲ. ಹಾಗಾಗಿ ಪಕ್ಷಕ್ಕೆ ತೊರೆಯಬೇಕಾಯ್ತು ಎಂದು ಪೂರ್ಣಿಮಾ ಶ್ರೀನಿವಾಸ್ ಹೇಳಿದರು.
ಪೂರ್ಣಿಮಾ ಶ್ರೀನಿವಾಸ್ ಕಾಂಗ್ರೆಸ್ ಸೇರ್ಪಡೆಗೆ ಗೊಲ್ಲ ಸಮುದಾಯದ ಹಲವರು ವಿರೋಧ ವ್ಯಕ್ತಪಡಿಸಿದರು.