Visitors have accessed this post 463 times.

ಪಾಣೆಮಂಗಳೂರು ಹಳೆಸೇತುವೆಯಲ್ಲಿ ಘನ ವಾಹನ ನಿಷೇಧ ಹೇರಿ ಹಾಕಲಾಗಿದ್ದ ಕಬ್ಬಿಣದ ತಡೆಗೆ ವಾಹನ ಡಿಕ್ಕಿ..!

Visitors have accessed this post 463 times.

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ಬಿರುಕು ಕಂಡ ಹಿನ್ನೆಲೆಯಲ್ಲಿ ಘನಗಾತ್ರದ ವಾಹನಗಳು ಸಂಚಾರ ನಿಷೇಧ ಹೇರಿ ಇಲಾಖೆ ಹಾಕಲಾಗಿದ್ದ ಕಬ್ಬಿಣದ ತಡೆಗೆ ವಾಹನ ವೊಂದು ಡಿಕ್ಕಿಹೊಡೆದ ಪರಿಣಾಮವಾಗಿ ಕೆಳಕ್ಕೆ ಬಿದ್ದ ಘಟನೆ ಶನಿವಾರ ಮುಂಜಾನೆ ಸಂಭವಿಸಿದೆ.ಶತಮಾನದ ಉಕ್ಕಿನ ಸೇತುವೆಯಾಗಿರುವ ಪಾಣೆಮಂಗಳೂರು ಬ್ರಿಡ್ಜ್ ನ ಮಧ್ಯ ಭಾಗದಲ್ಲಿ ಸಣ್ಣದಾದ ಬಿರುಕು ಕಂಡ ಕಾರಣಕ್ಕಾಗಿ ಪ್ರಯಾಣಿಕರ ಸುರಕ್ಷತೆಯ ದೃಷ್ಟಿಯಿಂದ ಲಾರಿ ಸಹಿತ ಇತರ ಘನವಾಹನಗಳು ಸಂಚಾರ ಮಾಡದಂತೆ ಪುರಸಭೆ ಸೇತುವೆಯ ಎರಡು ಬದಿಗಳಲ್ಲಿ ಕಬ್ಬಿಣದ ಪಿಲ್ಲರ್ ಗಳನ್ನು ಹಾಕಿ ಅದರ ಮೇಲೆ ಅಡ್ಡಲಾಗಿ ರಾಡ್ ಹಾಕಲಾಗಿತ್ತು.
ಆದರೆ ಸೇತುವೆ ಪ್ರವೇಶಕ್ಕೆ ಮೊದಲು ಘನಗಾತ್ರದ ವಾಹನಗಳ ನಿರ್ಬಂಧ ಮಾಡಲಾಗಿರುವ ಬಗ್ಗೆ ಯಾವುದೇ ಸೂಚನಾ ಫಲಕಗಳನ್ನು ಹಾಕದ ಹಿನ್ನೆಲೆಯಲ್ಲಿ ಅರಿವಿಲ್ಲದೆ ಗೂಡ್ಸ್ ಟೆಂಪೋ ವೊಂದು ಸೇತುವೆಯಲ್ಲಿ ಸಂಚಾರ ಮಾಡಿದಾಗ ರಾಡ್ ಕೆಳಕ್ಕುರಳಿ ಬಿದ್ದಿದೆ.ಅದೃಷ್ಟವಶಾತ್ ರಾಡ್ ಬೀಳುವ ವೇಳೆ ಹಿಂಬದಿಯಿಂದ ವಾಹನವಿಲ್ಲದ ಕಾರಣಕ್ಕಾಗಿ ಯಾವುದೇ ಪ್ರಾಣಹಾನಿ ನಡೆದಿಲ್ಲ.
‌ಕಾಮಗಾರಿ ನಡೆಸಿದವರು ಸರಿಯಾಗಿ ರಾಡ್ ನ್ನು ಅಳವಡಿಸಿಲ್ಲ ಎಂಬ ಆರೋಪಗಳು ಕೂಡ ಕೇಳಿ ಬಂದಿದೆ.
ಅವೈಜ್ಞಾನಿಕ ವಿಧಾನದಿಂದ ಮಾಡಿರುವ ಕಾಮಗಾರಿ ಜೀವಕ್ಕೆ ಅಪಾಯವಾಗುವ ಸಂಭವಿದೆ.
ವಾಹನದ ಮೇಲ್ಬಾಗ ಡಿಕ್ಕಿಯಾದ ಪರಿಣಾಮ ರಾಡ್ ಕೆಳಗುರುಳಿದೆ. ಬಳಿಕ ಕೆಲವೊತ್ತು ಸಂಚಾರಕ್ಕೆ ಅಡ್ಡಿಯಾಗಿತ್ತು. ಸ್ಥಳೀಯರು ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟ ಬಳಿಕ ಮತ್ತೆ ರಾಡ್ ನ್ನು ಮೇಲಕ್ಕೆ ಸಿಕ್ಕಿಸಿದ್ದಾರೆ. ಮತ್ತೆ ಘನಗಾತ್ರದ ವಾಹನಗಳು ಗೊತ್ತಿಲ್ಲದೆ ಸೇತುವೆಯಲ್ಲಿ ಸಂಚಾರ ಮಾಡಿ ಕಬ್ಬಿಣದ ರಾಡ್ ಮತ್ತೆ ಬೀಳುವ ಸ್ಥಿತಿಯಲ್ಲಿ ಇರುವುದು ಅಪಾಯಕಾರಿಯಾಗಿದೆ ಎಂದು ಸ್ಥಳೀಯರ ವಾದವಾಗಿದೆ.
ಇಲಾಖೆ ಕಾಮಗಾರಿ ಮಾಡುವಾಗ ಅದರಿಂದಾಗುವ ಪರಿಣಾಮಗಳ ಬಗ್ಗೆ ಅರಿತು ಮಾಡಬೇಕಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *