Visitors have accessed this post 273 times.
ಶಿರಸಿ: ಎರಡು ಬಸ್ಸುಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಹತ್ತಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡ ಘಟನೆ ತಾಲೂಕಿನ ಇಸಳೂರು ಸಮೀಪ ಆ.22ರ ರವಿವಾರ ಮುಂಜಾನೆ ಸಂಭವಿಸಿದೆ.
ರಸ್ತೆ ಅಪಘಾತದಲ್ಲಿ ಗಾಯಗೊಂಡವರೆಲ್ಲರನ್ನೂ ಶಿರಸಿಯ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಶಿರಸಿಯಿಂದ ಹೊರಟಿದ್ದ ವಾಯುವ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ ಮತ್ತು ಬೆಂಗಳೂರಿಂದ ಬರುತ್ತಿದ್ದ ಗ್ರೀನ್ ಲೈನ್ ಖಾಸಗಿ ಬಸ್ ನಡುವೆ ಮುಖಾಮುಖಿ ಅಪಘಾತ ನಡೆದಿದ್ದು, ಎರಡೂ ಬಸ್ ನಲ್ಲಿದ್ದ ಹತ್ತಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರಗಾಯವಾಗಿದೆ. ಚಾಲಕನನ್ನು ಹೊರ ತೆಗೆಯಲು ಸಾರ್ವಜನಿಕರು ಶ್ರಮಿಸಿದ್ದರು.