August 30, 2025
WhatsApp Image 2023-10-22 at 12.01.55 PM

ಬೆಳ್ತಂಗಡಿ: ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ ವತಿಯಿಂದ ಪಕ್ಷ ಸಮಾವೇಶವು ಕ್ಷೇತ್ರ ಅಧ್ಯಕ್ಷರಾದ ನವಾಝ್ ಕಟ್ಟೆ ಅವರ ಅಧ್ಯಕ್ಷತೆಯಲ್ಲಿ ಬೆಳ್ತಂಗಡಿಯಲ್ಲಿ ನಡೆಯಿತು.
ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಎಸ್‌ಡಿಪಿಐ ಕರ್ನಾಟಕ ರಾಜ್ಯ ಪ್ರಧಾನ ಕಾರ್ಯದರ್ಶಿ ಅಫ್ಸರ್ ಕೊಡ್ಲಿಪೇಟೆ ಮಾತನಾಡಿ ದೇಶ ಮತ್ತು ರಾಜ್ಯದಲ್ಲಿನ ಸ್ಥಿತಿಗತಿಗಳ ವಿಷಯ ಬಗ್ಗೆ ಪ್ರಸ್ತಾಪಿಸಿ ಪಕ್ಷದ ಅಗತ್ಯತೆಯನ್ನು ತಿಳಿಸಿದರು. ರಾಜ್ಯದಲ್ಲಿ ಪಕ್ಷದ ಕಾರ್ಯ ಚಟುವಟಿಕೆಯ ವರದಿಯನ್ನು ನೀಡಿದರು.


ದ.ಕ ಜಿಲ್ಲಾಧ್ಯಕ್ಷರಾದ ಅನ್ವರ್ ಸಾದಾತ್ ಬಜತ್ತೂರು ಮಾತನಾಡಿ ಪಕ್ಷದ ಅನಿವಾರ್ಯತೆಯನ್ನು ತಿಳಿಸಿ, ಎಸ್‍ಡಿಪಿಐ ಪಕ್ಷವು ನಡೆಸಿದ ಹೋರಾಟದ ಬಗ್ಗೆ ವಿವರಿಸಿ ಮಾತನಾಡುತ್ತ ಮುಂದಿನ ದಿನಗಳಲ್ಲಿ ಪಕ್ಷವು ಇನ್ನಷ್ಟು ಹೋರಾಟಗಳನ್ನು ಕೈಗೆತ್ತಿಗೊಳ್ಳಲಿದ್ದೇವೆ ತಾವೆಲ್ಲರೂ ಪಕ್ಷದ ಬೆನ್ನೆಲುಬಾಗಿ ನಿಂತು ನಮ್ಮೊಂದಿಗೆ ಸಹಕರಿಸಬೇಕೆಂದರು. ನವೆಂಬರ್ ತಿಂಗಳಿನಲ್ಲಿ ನಡೆಯುವ ಪಕ್ಷದ ನಿಧಿ ಸಂಗ್ರಹ ಅಭಿಯಾನವನ್ನು ಯಶಸ್ವಿಗೊಳಿಸಬೇಕು, ಎಲ್ಲಾ ಕಾರ್ಯಕರ್ತರು ಈ ಅಭಿಯಾನದಲ್ಲಿ ಪಾಲ್ಗೊಂಡು ಪಕ್ಷವನ್ನು ತಳಮಟ್ಟದಲ್ಲಿ ಗಟ್ಟಿಗೊಳಿಸುವಂತೆ ಪಕ್ಷದ ಕಾರ್ಯಕರ್ತರಿಗೆ ಕರೆ ನೀಡಿದರು.
ಕ್ಷೇತ್ರ ಅಧ್ಯಕ್ಷರಾದ ನವಾಝ್ ಕಟ್ಟೆಯವರು ಬೆಳ್ತಂಗಡಿಯಲ್ಲಿ ಪಕ್ಷವನ್ನು ಜನಸಾಮಾನ್ಯರಿಗೆ ತಲುಪಿಸಲು ಬೇಕಾದ ರೂಪುರೇಷಗಳು, ತಾಲೂಕಿನ ಜನತೆಗೆ ಎಸ್‌ಡಿಪಿಐ ಪಕ್ಷದ ಕೊಡುಗೆಯನ್ನು ಪ್ರಸ್ತಾವಿಕದಲ್ಲಿ ಮಾತಾಡಿದರು.
ಕ್ಷೇತ್ರ ಸಮಿತಿ ಕಾರ್ಯದರ್ಶಿ ಅಶ್ಫಾಕ್ ಪುಂಜಾಲಕಟ್ಟೆ ಸ್ವಾಗತಿಸಿ, ಕುವೆಟ್ಟು ಬ್ಲಾಕ್ ಅಧ್ಯಕ್ಷರಾದ ಅಬ್ದುಲ್ ರವೂಫ್ ಪುಂಜಾಲಕಟ್ಟೆ ಧನ್ಯವಾದ ಅರ್ಪಿಸಿದರು.
ಈ ಸಂದರ್ಭ ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರ ಸಮಿತಿ ಉಪಾಧ್ಯಕ್ಷರಾದ ಇನಾಸ್ ರೋಡ್ರಿಗಸ್, ಹನೀಫ್ ಪುಂಜಾಲಕಟ್ಟೆ, ಬ್ಲಾಕ್ ನಾಯಕರು, ಪದಾಧಿಕಾರಿಗಳು, ಪಂಚಾಯತ್ ಸದಸ್ಯರು ಹಾಗೂ ಪಕ್ಷದ ಕಾರ್ಯಕರ್ತರು, ಹಿತೈಷಿಗಳು ಮತ್ತು ಬೆಂಬಲಿಗರು ಉಪಸ್ಥಿತರಿದ್ದರು.

About The Author

Leave a Reply