Visitors have accessed this post 885 times.
ಬೆಂಗಳೂರು: ನಟ ದರ್ಶನ್ ಅವರು ಹುಲಿ ಉಗುರಿನ ಲಾಕೆಟ್ ಧರಿಸಿದ್ದಾರೆ ಎನ್ನಲಾಗುತ್ತಿದ್ದು, ವರ್ತೂರು ಸಂತೋಷ್ ಬಂಧನದ ಬೆನ್ನಲೇ ಫೋಟೋವೊಂದು ವೈರಲ್ ಆಗುತ್ತಿದೆ. ಈ ನಡುವೆ ದರ್ಶನ್‌ವ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಕೂಡ ಅನೇಕ ಮಂದಿ ಆಗ್ರಹ ವ್ಯಕ್ತಪಡಿಸುತ್ತಿದ್ದಾರೆ.
ಅಂದ ಹಾಗೇ ನಟ ದರ್ಶನ್ ಹಾಗೂ ವಿನಯ್ ಗುರೂಜಿ ಅವರ ವಿರುದ್ಧ ಸರ್ವ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಶಿವಕುಮಾರ್ ಅವರು ಅರಣ್ಯಾಧಿಕಾರಿಗಳಿಗೆ ದೂರು ನೀಡಿದ್ದಾರೆ. ನಟ ದರ್ಶನ್, ವಿನಯ್ ಗುರೂಜಿಯನ್ನೂ ಕರೆಸಿ ವಿಚಾರಿಸಿ ಅವರನ್ನು ಕರೆಸಿ ವಿಚಾರಣೆ ಮಾಡಿ ಅಂಥ ಆಗ್ರಹಿಸುತ್ತಿದ್ದಾರೆ.
ಈ ನಡುವೆ ವರ್ತೂರು ಸಂತೋಷ್ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 10’ರಲ್ಲಿ ಸ್ಪರ್ಧಿ ಆಗಿದ್ದರು, ಅವರನ್ನು ಹುಲಿ ಉಗುರು ಇರುವ ಲಾಕೆಟ್ ಧರಿಸಿದ್ದರಿಂದ ಅವರನ್ನು ಪೊಲೀಸರು ಬಂಧಿಸಿದ್ದು, ಸದ್ಯ ಅವರನ್ನು ನ್ಯಾಯಾಂಗ ಬಂಧನದಲ್ಲಿ ಇರಿಸಲಾಗಿದೆ. ಸದ್ಯ ದರ್ಶನ್ ಮತ್ತು ವಿನಯ್ ಗುರೂಜಿ ವಿರುದ್ಧ ದೂರು ದಾಖಲು ಆಗಿರುವ ಹಿನ್ನಲೆಯಲ್ಲಿ ಇಬ್ಬರನ್ನು ಕರೆಸಿ ವಿಚಾರಣೆ ಮಾಡುತ್ತಾರ? ಇಲ್ಲವೇ ಬಂಧನ ಮಾಡುತ್ತಾರ ಎನ್ನುವುದು ಈಗ ಸದ್ಯದ ಪ್ರಶ್ನೆಯಾಗಿದೆ.