Visitors have accessed this post 342 times.

ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ ಸ್ಥಳದಲ್ಲೇ 12 ಮಂದಿ ದುರ್ಮರಣ

Visitors have accessed this post 342 times.

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಸಮೀಪ ಭೀಕರ ಅಪಘಾತ ನಡೆದಿದ್ದು, ಸ್ಥಳದಲ್ಲೇ 12 ಮಂದಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ರಸ್ತೆ ಬದಿ ನಿಂತಿದ್ದ ಲಾರಿಗೆ ಟಾಟಾ ಸುಮೋ ಡಿಕ್ಕಿಯಾಗಿ ಈ ಅಪಘಾತವಾಗಿದೆ ಎನ್ನಲಾಗಿದೆ.

ನಿಂತಿದ್ದ ಸಿಮೆಂಟ್‌ಗಾಡಿಗೆ ಟಾಟಾ ಸುಮೋ ಡಿಕ್ಕಿಯಾಗಿದೆ ಎನ್ನಲಾಗಿದೆ ಅಂತ ಸ್ಥಳೀಯರು ತಿಳಿಸಿದ್ದಾರೆ.

ಬೆಂಗಳೂರು -ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿಯಲ್ಲಿ ದಟ್ಟ ಮಂಜು ಕವಿದಿದ್ದರಿಂದ ಈ ಘಟನೆ ನಡೆದಿದೆ ಅಂತ ಸ್ಥಳೀಯರು ಮಾಧ್ಯಮಗಳಿಗೆ ತಿಳಿಸಿದ್ದು, ರಸ್ತೆಯ ಅವ್ಯವಸ್ಥೆ ಬಗ್ಗೆ ಕಿಡಿಕಾರಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ.

Leave a Reply

Your email address will not be published. Required fields are marked *