Visitors have accessed this post 787 times.
ಬೆಂಗಳೂರು : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಲ್ಲಿ ಒಂದು ಗೃಹಲಕ್ಷ್ಮಿ. ಈ ಯೋಜನಯೆ ಅಡಿಯಲ್ಲಿ ರಾಜ್ಯದ ಪಡಿತರ ಚೀಟಿದಾರರ ಯಜಮಾನಿ ಮಹಿಳೆಯರಿಗೆ ಪ್ರತಿ ತಿಂಗಳು 2000 ಹಣ ಜಮಾ ಮಾಡಲಾಗುತ್ತಿದೆ. ಇಂತಹ ಹಣ ಇನ್ನೂ ಅನೇಕ ಯಜಮಾನಿ ಮಹಿಳೆಯರ ಖಾತೆಗೆ ಜಮಾ ಆಗಿಲ್ಲ.
ಹಾಗಾದ್ರೇ ಅದಕ್ಕೆ ಕಾರಣ ಏನು ಅನ್ನೋ ಬಗ್ಗೆ ಸರ್ಕಾರವೇ ಸ್ಪಷ್ಟನೆ ನೀಡಿದೆ. ಅದು ಏನು ಅಂತ ತಿಳಿದುಕೊಂಡು, ನೀವು ಸರಿ ಮಾಡಿಕೊಂಡ್ರೇ, ಕೂಡಲೇ 2000 ಹಣ ನಿಮ್ಮ ಖಾತೆಗೆ ಜಮಾ ಆಗಲಿದೆ.
ಹೌದು ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ಗೃಹಲಕ್ಷ್ಮಿ ಯೋಜನೆಯಡಿ ಪಡಿತರ ಚೀಟಿ ಹೊಂದಿದ ‘ಕುಟುಂಬದ ಯಜಮಾನಿ’ ಎಂದು ಗುರುತಿಸಲ್ಪಟ್ಟ ಮಹಿಳೆಯರಿಗೆ ಆಧಾರ್ ಜೋಡಣೆಯಾಗಿರುವ ಬ್ಯಾಂಕ್ ಖಾತೆಗೆ ಆಗಸ್ಟ್ – 2023 ರಿಂದ ಮಾಹೆಯಾನ ರೂ.2000/- ಗಳನ್ನು ಡಿಬಿಟಿ ಮೂಲಕ ಹಣ ಜಮೆ ಮಾಡಲಾಗುತ್ತಿದೆ.
ಈಗಾಗಲೇ ರಾಜ್ಯಾಧ್ಯಂತ ಸೆಪ್ಟೆಂಬರ್ ತಿಂಗಳ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಕೂಡ ಜಮಾ ಮಾಡಲಾಗುತ್ತಿದೆ. ಈಗಾಗಲೇ ಶಿವಮೊಗ್ಗ ಜಿಲ್ಲೆಯಲ್ಲಿ ಸೆಪ್ಟೆಂಬರ್ ಮಾಹೆಯಲ್ಲಿ 3,45,386 ಫಲಾನುಭವಿಗಳ ಬ್ಯಾಂಕ್ ಖಾತೆಗೆ ಡಿಬಿಟಿ ಮೂಲಕ ರೂ.2000/- ಹಣ ಜಮೆ ಮಾಡಲಾಗಿದೆ ಅಂತ ಜಿಲ್ಲಾಡಳಿತ ತಿಳಿಸಿದೆ.
ಇನ್ನೂ ಅರ್ಜಿ ಸಲ್ಲಿಸಿದ 31,512 ಫಲಾನುಭವಿಗಳ ಆಧಾರ್ ಸಂಖ್ಯೆ ಮತ್ತು ಬ್ಯಾಂಕ್ ಖಾತೆ ಜೋಡಣೆಯಾಗದೇ ಇ-ಕೆವೈಸಿ ಅಪ್‍ಡೇಟ್ ಆಗದೇ ಇರುವುದರಿಂದ ಹಣ ಜಮೆಯಾಗದೇ ಇರುವವರು ತಮ್ಮ ಖಾತೆ ಹೊಂದಿರುವ ಬ್ಯಾಂಕ್‍ಗಳಿಗೆ ಸಂಪರ್ಕಿಸಿ ಆಧಾರ್ ಕಾರ್ಡ್ ಮತ್ತು ಬ್ಯಾಂಕ್ ಖಾತೆ ವಿವರಗಳನ್ನು ನೀಡಿ ಆಧಾರ್ ಜೋಡಣೆ ಮತ್ತು ಇಕೆವೈಸಿ ಅಪ್‍ಡೇಟ್ ಮಾಡಿಸಿಕೊಳ್ಳುವಂತೆ ತಿಳಿಸಿದೆ.
ಫಲಾನುಭವಿಗಳು ಆಧಾರ್ ಕಾರ್ಡ್, ಪಡಿತರ ಚೀಟಿಯನ್ವಯ ಹಾಗೂ ಪಾಸ್‍ಪುಸ್ತಕದಲ್ಲಿರುವ ಖಾತೆದಾರರ ಹೆಸರು ಹೊಂದಾಣಿಕೆ ಮಾಡಿಸಿಕೊಳ್ಳುವಂತೆ ತಿಳಿಸಲಾಗಿದೆ.
ಇದೇ ಇ-ಕೆವೈಸಿ ಅಪ್ ಡೇಟ್ ಆಗದೇ ಇರೋ ಕಾರಣಕ್ಕೆ ಗೃಹಲಕ್ಷ್ಮಿ ಯೋಜನೆ ಹಣ ನಿಮ್ಮ ಖಾತೆಗೆ ಜಮಾ ಆಗಿಲ್ಲ. ಈ ಕೂಡಲೇ ಅಪ್ ಡೇಟ್ ಮಾಡಿಸಿದ್ರೇ ನಿಮ್ಮ ಖಾತೆಗೂ ಗೃಹಲಕ್ಷ್ಮಿ ಯೋಜನೆಯ 2000 ರೂ ಸಹಾಯಧನ ಡಿಬಿಟಿ ಮೂಲಕ ನಿಮ್ಮ ಬ್ಯಾಂಕ್ ಖಾತೆಗೆ ವರ್ಗಾವಣೆ ಆಗಲಿದೆ ಅಂತ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ತಿಳಿಸಿದೆ.