August 30, 2025
WhatsApp Image 2023-10-27 at 4.30.31 PM

ಮಂಗಳೂರು: ಫೇಸ್‌ಬುಕ್ ಪೇಜ್‌ನಲ್ಲಿ ಸಿಎಂ ಸಿದ್ದರಾಮಯ್ಯರನ್ನು ಕಲೆಕ್ಷನ್ ಮಾಸ್ಟರ್ ಎಂದು ಅವಹೇಳನಕಾರಿಯಾಗಿ ಪೋಸ್ಟ್ ಹಾಕಿದ್ದ ಶಾಸಕ ಹರೀಶ್ ಪೂಂಜ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಶಾಸಕ ಹರೀಶ್ ಪೂಂಜ ಅವರು ಫೇಸ್ ಬುಕ್ ಪೇಜ್ ನಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಬೆಂಗಳೂರಿನ ಸಿಎಂ ನಿವಾಸದ‌ ಫೋಟೊ ಶೇರ್ ಮಾಡಿ “ಕಲೆಕ್ಷನ್ ಮಾಸ್ಟರ್ (ಸಿಎಂ) ಆಫ್ ಕರ್ನಾಟಕ” ಎಂಬ ಟ್ಯಾಗ್ ಲೈನ್ ಬರೆದಿದ್ದರು. ಈ ಬಗ್ಗೆ ಕಾಂಗ್ರೆಸ್‌ ಮುಖಂಡ, ಮಾಜಿ ಜಿಲ್ಲಾ ಪಂಚಾಯತ್‌ ಸದಸ್ಯ ಶೇಖರ್ ಬೆಳ್ತಂಗಡಿ ಠಾಣೆಯಲ್ಲಿ ರಾಜ್ಯದ ಸಿಎಂ ಅವರನ್ನು ಅವಹೇಳನ ಮಾಡಿದ್ದಾಗಿ ದೂರು ದೂರು ನೀಡಿದ್ದರು. ಇದರಂತೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಇತ್ತೀಚೆಗೆ ಅರಣ್ಯ ಅಧಿಕಾರಿಗಳನ್ನು ಅವಾಚ್ಯವಾಗಿ ನಿಂದಿಸಿದ ವಿಚಾರದಲ್ಲಿ ಶಾಸಕ ಹರೀಶ್ ಪೂಂಜ ವಿರುದ್ಧ ಉಪ್ಪಿನಂಗಡಿ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ಒಂದು ವಾರದ ಅಂತರದಲ್ಲಿ ಅವರ ಮೇಲೆ ಮತ್ತೊಂದು ಬೆಳ್ತಂಗಡಿ ಠಾಣೆಯಲ್ಲಿ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.

About The Author

Leave a Reply