Visitors have accessed this post 583 times.
ಬೆಳ್ತಂಗಡಿ : ಉಜಿರೆ ಸಮೀಪದ ಬದನಾಜೆಯಲ್ಲಿ ಬೈಕ್ ಡಿಕ್ಕಿ ಹೊಡೆದು ಶಾಲಾ ವಿದ್ಯಾರ್ಥಿನಿಯೊಬ್ಬಳು ಮೃತಪಟ್ಟ ಘಟನೆ ಶುಕ್ರವಾರ ಸಂಜೆ ಸಂಭವಿಸಿದೆ.ಸ್ಥಳೀಯ ನಿವಾಸಿ ಅಶೋಕ್ ಮತ್ತು ಜಯಶ್ರೀ ದಂಪತಿಗಳ ಪುತ್ರಿ, ಮೂರನೇ ತರಗತಿಯ ವಿದ್ಯಾರ್ಥಿನಿಯಾಗಿರುವ ಅಂಕಿತಾ (8) ಮೃತ ಬಾಲಕಿ.ಅಂಕಿತಾ ರಸ್ತೆ ದಾಟುವಾಗ ಬೈಕ್ ಡಿಕ್ಕಿ ಹೊಡೆದಿತ್ತು. ಈ ಬಗ್ಗೆ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಸವಾರ ವಿಕಾಸ್ ವಿರುದ್ಧ ದೂರು ದಾಖಲಾಗಿದೆ.ಮೃತ ಬಾಲಕಿ ತಾಯಿ, ಅವಳಿ ಸಹೋದರಿ ಹಾಗೂ ಸಹೋದರನನ್ನು ಅಗಲಿದ್ದಾರೆ.