
ಬೆಂಗಳೂರು: ಕರ್ನಾಟಕದ ಬಿಜೆಪಿಯಲ್ಲಿ ಕೆಲವರಿಗೆ ದುರಹಂಕಾರ ಬಂದಿದೆ ಎಂದು ಮಾಜಿ ಸಚಿವ ಎಂಪಿ ರೇಣುಕಾಚಾರ್ಯ ಅವರು ಸ್ವಪಕ್ಷದ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.



ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷ ಸೋತ ನಂತರ ಎಲ್ಲರನ್ನೂ ಕರೆದು ಮಾತಾಡಿಸಬೇಕು. ಯಡಿಯೂರಪ್ಪ ಹಿಂದೆಲ್ಲ ಆ ಕೆಲಸ ಮಾಡಿದ್ರು. ಆದರೆ ಬಿಜೆಪಿಯಲ್ಲಿ ಕೆಲವರ ದುರಹಂಕಾರದಿಂದ ಬಹಳ ಜನ ಬೇಸತ್ತು ಹೋಗಿದ್ದಾರೆ ಎಂದರು.
ಇನ್ನು ಬೇಸತ್ತು ಹೋಗಿರುವವರು ಮುಂದೆ ಪಕ್ಷ ಬಿಡಬಹುದು. ಯಡಿಯೂರಪ್ಪ ಅವರನ್ನು ಕಡೆಗಣಿಸಲಾಗಿದೆ ಅಂತ ಜನ ಮಾತಾಡ್ತಿದ್ದಾರೆ. ನಾನು ಹೇಳ್ತಿಲ್ಲ, ಜನ ಹಾಗೆ ಹೇಳ್ತಿದ್ದಾರೆ ಎಂದಿದ್ದಾರೆ.