Visitors have accessed this post 369 times.
ಮಂಗಳೂರು: ಸಿಎಂ ಸಿದ್ಧರಾಮಯ್ಯ ವಿರುದ್ಧ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿದಂತ ಶಾಸಕ ಹರೀಶ್ ಪೂಂಜಾ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಈ ಬೆನ್ನಲ್ಲೇ ಆತ ಪಾಪ ಇನ್ನೂ ರಾಜಕೀಯದಲ್ಲಿ ಬಚ್ಚಾ ಅಂತ ಸಿಎಂ ಸಿದ್ಧರಾಮಯ್ಯ ವಾಗ್ಧಾಳಿ ನಡೆಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತಾನಾಡಿದಂತ ಅವರು,ಕಲೆಕ್ಷನ್ ಮಾಸ್ಟರ್ ಎಂದು ಬಗ್ಗೆ ಹರೀಶ್ ಪೂಂಜಾ ಪೋಸ್ಟ್ಗೆ ಸಂಬಂಧಿಸಿದಂತೆ ಹರೀಶ್ ಪೂಂಜಾ ಶಾಸಕನಾಗಿರೋದು ಮೊನ್ನೆ.
ನಾನು 1983ರಲ್ಲಿ ಶಾಸಕನಾಗಿ, 1985ರಲ್ಲೇ ಸಚಿವನಾಗಿದ್ದವನು ಎಂದರು.
ನಾನು 1983ರಿಂದ ಈವರೆಗೆ ಯಾರೂ ನನ್ನನ್ನು ಈ ರೀತಿ ಕರೆದಿರಲಿಲ್ಲ. ಶಾಸಕ ಹರೀಶ್ ಪೂಂಜಾ ಪಾಪ ಇನ್ನೂ ರಾಜಕೀಯದಲ್ಲಿ ಬಚ್ಚಾ. ಆ ಮಾತನ್ನು ಹಿಂದಿನ ಸರ್ಕಾರ ಹಾಗೂ ಬಿಜೆಪಿ ಮುಖ್ಯಮಂತ್ರಿಗಳಿಗೆ ಹೇಳಲಿ ಎಂದು ಕಿಡಿಕಾರಿದರು.