Visitors have accessed this post 995 times.
ಕೇರಳದ ಕಲಮಸ್ಸೆರಿ ಸ್ಫೋಟದಲ್ಲಿ ಬಾಂಬ್ ಇಟ್ಟಿದ್ದು ನಾನೇ ಎಂದು ವ್ಯಕ್ತಿಯೊಬ್ಬ ತ್ರಿಶೂರ್ ಜಿಲ್ಲೆಯ ಕೊಡಕರ ಪೊಲೀಸ್ ಠಾಣೆಯಲ್ಲಿ ಶರಣಾಗಿದ್ದಾನೆ.
ಆತನನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. ಆತನಿಗೂ, ಸ್ಫೋಟಕ್ಕೂ ಯಾವುದೇ ಸಂಬಂಧವಿದೆಯೇ ಎಂಬುದನ್ನು ಪೊಲೀಸರು ಇನ್ನೂ ಖಚಿತಪಡಿಸಿಲ್ಲ, ವಿಚಾರಣೆ ಮುಂದುವರೆದಿದೆ. ಬೆಳಿಗ್ಗೆ 9 ಗಂಟೆಯ ಸುಮಾರಿಗೆ ಸ್ಫೋಟದ ಬಗ್ಗೆ ತುರ್ತು ಕರೆ ಬಂದಿತು ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ. ಅಗ್ನಿಶಾಮಕ ರಕ್ಷಣಾ ಮತ್ತು ಪೊಲೀಸ್ ಸಿಬ್ಬಂದಿಯಿಂದ ಸ್ಪೋಟಗೊಂಡ ಸ್ಥಳದಿಂದ ಜನರನ್ನು ಸ್ಥಳಾಂತರಿಸಿದ್ದಾರೆ.
ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಗಾಯಾಳುಗಳ ಅಂಕಿಅಂಶಗಳನ್ನು ದೃಢಪಡಿಸಿದ್ದಾರೆ. ತನಿಖೆ ನಡೆಯುತ್ತಿದ್ದು, ಪೂರ್ಣಗೊಂಡ ಬಳಿಕ ಹೆಚ್ಚಿನ ಮಾಹಿತಿ ಲಭ್ಯವಾಗಲಿದೆ ಎಂದು ಅವರು ತಿಳಿಸಿದ್ದಾರೆ.